ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಡದಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿಗೆ ನೀಡಲಾಗಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ಸಿಐಡಿ ಹಾಗೂ ನಿತ್ಯಾನಂದ ಸ್ವಾಮೀಜಿಗೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಪ್ರಕರಣದ ಮೂಲ ದೂರುದಾರ ಲೆನಿನ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳಿಗೆ ಶುಕ್ರವಾರ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆಗಳನ್ನು ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಪ್ರಕರಣದಲ್ಲಿ ನ್ಯಾಯಾಲಯ 2012ರಲ್ಲಿ ಜಾಮೀನು ನೀಡುವಾಗ ಅ ಧೀನ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಬೇಕು ಎಂದು ಷರತ್ತು ವಿಧಿ ಸಿತ್ತು. ಆದರೆ ನಿತ್ಯಾನಂದ ಷರತ್ತು ಉಲ್ಲಂಘನೆ ಮಾಡಿದ್ದಾರೆ. ಕೋರ್ಟ್ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ಆರೋಪಿಸಿದರು.
ಅಲ್ಲದೆ, ನಿತ್ಯಾನಂದ ಅವ ಧಿ ಮುಗಿದಿ ರುವ ಪಾಸ್‌ಪೋರ್ಟ್ ಬಳಸಿ ದೇಶ ತೊರೆ ದಿದ್ದಾನೆ. ಆದರೆ, ತಾನು ಭಾರತದ ಲ್ಲಿಯೇ ಇದ್ದೇನೆ ಎನ್ನುವಂತೆ ಬಿಂಬಿಸಿ ಕೊಂಡು ಸುಳ್ಳು ಪ್ರಮಾಣಪತ್ರ ಸಲ್ಲಿಸಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಲು ವಿನಾಯಿತಿಗೆ ಅರ್ಜಿ ಸಲ್ಲಿಸಿ¨ªಾನೆ. ಆದ್ದರಿಂದ ಜಾಮೀನು ರದ್ದುಪಡಿಸಬೇಕೆಂದು ಮನವಿ ಮಾಡಿದರು.
ನಿತ್ಯಾನಂದ ಸ್ವಾಮೀಜಿ ಸದ್ಯ ಎಲ್ಲಿದ್ದಾನೆ ಎಂಬುದು ಯಾರಿಗೂ ತಿಳಿದಿಲ್ಲ. ಕೆಲ ದಿನ ಈಕ್ವೇಡಾರ್ ದ್ವೀಪದಲ್ಲಿ ತಾನೇ ಒಂದು ರಾಷ್ಟ್ರ ಸ್ಥಾಪಿಸಿರುವುದಾಗಿ ಸುದ್ದಿ ಬಂದಿತ್ತು. ಆತ ಅಲ್ಲಿಯೂ ಇಲ್ಲ ಎಂದು ಹೇಳಲಾಗುತ್ತಿದೆ. ಪೊಲೀಸರು ಆತ ವಿಚಾರಣೆಗೆ ಹಾಜರಾಗದಿದ್ದರೂ ಹುಡುಕುವ ಕೆಲಸ ಮಾಡುತ್ತಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಅತ್ಯಾಚಾರ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿ ಸಿದಂತೆ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧ ರಾಮನಗರ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಿಬೇಕೆಂದೂ ಲೆನಿನ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿದ್ದಾರೆ.