ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ನಗರಸಭೆ, ಫುಟ್‌ಪಾತ್ ವ್ಯಾಪಾರಿಗಳ ತೆರವಿಗೆ ಕ್ರಮ ಕೈಗೊಂಡಿದೆ.
Advertisement
ನಗರಸಭೆ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷ ಟಿ.ಜೆ. ವೆಂಕಟೇಶ್, ನಗರಸಭೆ ಸದಸ್ಯರಾದ ಬಿ.ಟಿ. ರಮೇಶ ಗೌಡ, ಪೌರಾಯುಕ್ತ ಜೆ.ಟಿ. ಹನುಮಂತರಾಜು, ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ನರೇಂದ್ರಬಾಬು, ಆರೋಗ್ಯ ನಿರೀಕ್ಷಕರಾದ ಮಹಲಿಂಗಪ್ಪ, ನಿರ್ಮಲಾ, ರುಕ್ಮಿಣಿ ಅವರು ಫುಟ್‌ಪಾತ್‌ನಲ್ಲಿ ವ್ಯಾಪಾರ ಮಾಡುತ್ತಿರುವವರಿಗೆತೆರವುಗೊಳಿಸುವಂತೆ ಸೂಚನೆ ನೀಡಿದರು.
ಫುಟ್‌ಪಾತ್ ವ್ಯಾಪಾರಿಗಳು ವ್ಯಾಪಾರದಲ್ಲಿ ತೊಡಗಿದ್ದಾರೆ. ತೆರವುಗೊಳಿಸುವಂತೆ ಮೌಖೀಕವಾಗಿ ಸೂಚನೆ ನೀಡಿದ್ದರೂ
ಪ್ರಯೋಜನವಾಗಿಲ್ಲ. ಆದ್ದರಿಂದ ನಗರಸಭೆ ಸಿಬ್ಬಂದಿಯೊಂದಿಗೆ ತೆರವುಗೊಳಿಸುವ ಕಾರ್ಯವನ್ನು ಪ್ರಾರಂಭಿಸಲಾಗಿದೆ ಎಂದರು. ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ನರೇಂದ್ರಬಾಬು ಮಾತನಾಡಿ, ಪ್ಲಾಸ್ಟಿಕ್ ಕವರ್‌ಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದ್ದರೂ ನಗರಸಭೆಯ ಕಣ್ಣು ತಪ್ಪಿಸಿ ಈ ದಂಧೆ ನಡೆಸಲಾಗುತ್ತಿದೆ. ದಾಳಿಯ
ಸಂದರ್ಭದಲ್ಲಿ ಕೆಲವು ಅಂಗಡಿಗಳಲ್ಲಿದ್ದ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾರ್ವಜನಿಕರ ಆಕ್ಷೇಪಣೆ ಮೇರೆಗೆ ತೆರವು ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದರು.