ಕೋಲಾರ: ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವಾಣಿಜ್ಯ ಮಳಿಗೆಗಳ ತೆರಿಗೆಯನ್ನು ಸಮರ್ಪಕವಾಗಿ ವಸೂಲಿಮಾಡಬೇಕು ಎಂದು ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸಚಿವ ಕೆ.ಆರ್. ನಾರಾಯಣಗೌಡ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿಸೋಮವಾರ ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ತೆರಿಗೆ ಹಣ ಕಡಿಮೆ ಆಗುತ್ತಿದ್ದು, ಅಧಿಕಾರಿಗಳು ಗಮನ ಹರಿಸಬೇಕು. ಪ್ರತಿ ತಾಲೂಕಿನಲೀಗಲ್ ಅಡ್ವೆ„ಸರ್‌ಗಳಿಂದ ಸರ್ಕಾರಕ್ಕೆ ಬರುವ ಆದಾಯಕುಂಠಿತಗೊಳ್ಳುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಜನವರಿ ತಿಂಗಳಲ್ಲಿ ಲೋಕಾರ್ಪಣೆ: ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಯರಗೋಳ್ ಡ್ಯಾಂ ಯೋಜನೆ ಮುಕ್ತಾಯ ಹಂತದಲ್ಲಿದ್ದು, ಮುಂದಿನ ಜನವರಿ ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ. ಹಸಿ ಕಸ ಮತ್ತು ಒಣಕಸಕ್ಕೆ ಸಂಬಂಧಿಸಿದಂತೆ ಮಂಡ್ಯ ಮತ್ತು ತುಮಕೂರು ಜಿಲ್ಲೆಗಳು ಪ್ರಗತಿ ಸಾಧಿಸಿವೆ. ಅದೇ ರೀತಿಕೋಲಾರ ಜಿಲ್ಲೆಯಲ್ಲಿಯೂ ಪ್ರಗತಿ ಸಾಧಿಸಬೇಕು ಎಂದರು.
ಸಭೆಯಲ್ಲಿ ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್, ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ, ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್, ವಿಧಾನಪರಿಷತ್ ಸದಸ್ಯ ಗೋವಿಂದರಾಜು, ವೈ.ಎ. ನಾರಾಯಣ ಸ್ವಾಮಿ, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಉಪವಿಭಾಗಾಧಿಕಾರಿ ಸೋಮಶೇಖರ್ ಸೇರಿದಂತೆ ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಇಲಾಖೆಯಿಂದ ನೇಮಕ : ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವಪೌರಕಾರ್ಮಿಕರನ್ನು ಏಜೆನ್ಸಿ ಹಾಗೂ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಇಲಾಖೆ ವತಿಯಿಂದ ಪೌರಕಾರ್ಮಿಕರನ್ನುನೇಮಕ ಮಾಡಿಕೊಳ್ಳಲಾಗುವುದುಎಂದು ತಿಳಿಸಿದರು. ಪೌರಾಡಳಿತ ಸಚಿವ ಕೆ.ಆರ್.ನಾರಾಯಣಗೌಡ ತಿಳಿಸಿದರು.