Advertisement
ಅನಂತರ ಮಂಗಳೂರಿನ ಮೀನುಗಾರಿಕೆ ಬಂದರು, ಮಂಜುಗಡ್ಡೆ ಸ್ಥಾವರ, ಡೀಸೆಲ್ ಬಂಕ್‌ಗಳ ಸ್ಥಿತಿಗತಿ ಪರಿಶೀಲಿಸಿದರು. ನಾಡದೋಣಿಗಳ ನಿಲುಗಡೆಗೆ ನಿಗಮದಿಂದ ಕೈಗೊಂಡಿ ರುವ ತೇಲುವ ಜೆಟ್ಟಿ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಅವರು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಜಾರಿಗೆ ಸೂಚನೆ
ನಿಗಮದ ಎಲ್ಲ ಶಾಖೆಗಳ ಶಾಖಾಧಿಕಾರಿಗಳೊಂದಿಗೆ ಸಭೆ ಯನ್ನು ನಡೆಸಿದ ಅವರು, ನಿಗಮದಲ್ಲಿ ಮೀನುಗಾರಿಕೆಗೆ ಮತ್ತು ಮೀನುಗಾರರಿಗೆ ಸಂಬಂಧಿಸಿದ ಚಾಲ್ತಿಯಲ್ಲಿರುವ ಯೋಜನೆಗಳು ಮತ್ತು 2024-25ನೇ ವರ್ಷದಲ್ಲಿ ನಿಗಮದಿಂದ ಕರಾವಳಿ ಮತ್ತು ಒಳನಾಡು ವಿಭಾಗದ ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ನೂತನ ಯೋಜನೆಗಳನ್ನು ಜಾರಿಗೊಳಿಸಲು ಮತ್ತು ಪ್ರಸ್ತುತ ಯೋಜನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Related Articles
ಸೀಮೆ ಎಣ್ಣೆ
ನಿಗಮದ ವತಿಯಿಂದ ನಾಡದೋಣಿಗಳಿಗೆ ಅವಶ್ಯವಿರುವ ಸೀಮೆ ಎಣ್ಣೆ ವಿತರಣೆಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಮೀನು ಹಿಡುವಳಿಯ ಮಾರಾಟಕ್ಕಾಗಿ ಉತ್ತಮ ವಾತಾವರಣವನ್ನು ಕಲ್ಪಿಸುವ ಹಿನ್ನಲೆಯಲ್ಲಿ ಹೊಸ ಮೀನು ಮಾರುಕಟ್ಟೆಗಳನ್ನು ರಾಜ್ಯದ ವಿವಿಧ ಭಾಗಗಳಲ್ಲಿ ನಿರ್ಮಾಣ ಚಿಂತನೆ ನಡೆಸಲಾಗಿದೆ ಎಂದರು. ಹೊನ್ನಾವರ ಬಂದರಿನಲ್ಲಿ ಮೀನುಗಾರ ಬೋಟುಗಳಿಗೆ ಕರರಹಿತ ಡೀಸಿಲನ್ನು ವಿತರಿಸಲು ಬಂಕ್ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
Advertisement
ಸಂವಾದಉಳ್ಳಾಲ ಮಹಿಳಾ ಮೀನುಗಾರಿಕಾ ಸಹಕಾರಿ ಸಂಘದ ಕಚೇರಿಗೆ ಭೇಟಿ ನೀಡಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರೊಂದಿಗೆ ಸಂವಾದವನ್ನು ನಡೆಸಿ, ಮೀನುಗಾರಿಕಾ ಚಟುವಟಿಕೆಗಳಲ್ಲಿ ಮಹಿಳೆಯರ ಪಾತ್ರ ಮತ್ತು ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು. ಸಂಘದ ಅಧ್ಯಕ್ಷೆ ಜಾನಕಿ ಪುತ್ರನ್, ಉಪಾಧ್ಯಕ್ಷೆ ಮೀನಾಕ್ಷಿ ಹಾಗೂ ನಿರ್ದೇಶಕರಾದ ನಾರಾಯಣಿ, ರೋಹಿಣಿ ಮತ್ತು ಸಂಘದ ಕಾರ್ಯದರ್ಶಿ ಉಮಾವತಿ ಮತ್ತಿತರರು ಉಪಸ್ಥಿತರಿದ್ದರು.