Advertisement

Police ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಈಶ್ವರಪ್ಪ ಅವರಿಗೆ ನೋಟಿಸ್

05:40 PM Feb 10, 2024 | Team Udayavani |

ದಾವಣಗೆರೆ: ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಆಗಮಿಸುವಂತೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಇಲ್ಲಿಯ ಬಡಾವಣೆ ಠಾಣೆ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.

Advertisement

ದೂರಿನ ಬಗ್ಗೆ ಕೆಲವು ಸತ್ಯಾಂಶ ಹಾಗೂ ಸನ್ನಿವೇಶಗಳನ್ನು ಖಚಿತ ಪಡಿಸಿಕೊಳ್ಳಬೇಕಾಗಿರುವುದರಿಂದ ವಿಚಾರಣೆಗಾಗಿ ಫೆ.15ರಂದು ಬೆಳಗ್ಗೆ 10.30 ಗಂಟೆಗೆ ಬಡಾವಣೆ ಪೊಲೀಸ್ ಠಾಣೆಗೆ ಆಗಮಿಸುವಂತೆ ಆರಕ್ಷಕ ಉಪ ನಿರೀಕ್ಷಕರು ನೋಟಿಸ್ ನಲ್ಲಿ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾಷ್ಟ್ರ ದ್ರೋಹಿಗಳ ಗುಂಡಿಕ್ಕಿ ಕೊಲ್ಲುವ ಕಾನೊನು ತರುವಂತೆ ಹೇಳಿಕೆ ನೀಡಿದ್ದ ಈಶ್ವರಪ್ಪ ವಿರುದ್ಧ ದಾವಣಗೆರೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಇಂದು ದಾವಣಗೆರೆ ಪೊಲೀಸರಿಂದ ಈಶ್ವರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಶಿವಮೊಗ್ಗದ ಈಶ್ವರಪ್ಪ ಅವರ ನಿವಾಸಕ್ಕೆ ಬಂದಿದ್ದ ದಾವಣಗೆರೆ ಬಡಾವಣೆ ಪೊಲೀಸರು ನೋಟಿಸ್ ನೀಡಿದ್ದರು.

ಕೆ.ಎಸ್. ಈಶ್ವರಪ್ಪ ನಗರದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಶುಕ್ರವಾರ ಇಲ್ಲಿಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಹನುಮಂತ ಎಂಬುವವರು ದೂರು ನೀಡಿದ್ದರು. ಕಲಂ 505 (1)(ಸಿ), 505(2), 506 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next