Advertisement
ಸಂಭವನೀಯ ಪ್ರವಾಹ ನಿರ್ವಹಣೆಯ ಸಿದ್ಧತೆಗೆ ಸಂಬಂಧಿಸಿದಂತೆ ಶನಿವಾರ ಮುಖ್ಯಮಂತ್ರಿಗಳು ನಡೆಸಿದ ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಅವರು ಮಾತನಾಡಿದರು. ಈ ಬಾರಿ ಒಂದು ವಾರ ಮುಂಚೆಯೇ ಮಳೆಯಾಗುತ್ತಿರುವುದರಿಂದ ನೆರೆಯ ರಾಜ್ಯದ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿರಬೇಕು. ಪ್ರತಿದಿನ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ, ಜಲಾಶಯಮಟ್ಟ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಬೆಳಗಾವಿ ಜಿಲ್ಲಾಡಳಿತಕ್ಕೆ ಮುಂಚಿತವಾಗಿ ಮಾಹಿತಿ ನೀಡದೇ ನೀರು ಬಿಡುಗಡೆ ಮಾಡದಂತೆ ನೆರೆಯ ರಾಜ್ಯದ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.
Related Articles
Advertisement
ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಜಿಲ್ಲೆಯಲ್ಲಿ ನಿಗದಿಗಿಂತ ಮಳೆಯ ಪ್ರಮಾಣ ಜಾಸ್ತಿಯಾಗಿದೆ. ಬೆಳೆಹಾನಿಯ ಕುರಿತು ನಿಖರ ವರದಿ ನೀಡುವಂತೆ ಅಧಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿಜಯಪುರ ಜಿಲ್ಲೆಯ ಕುರಿತು ಮಾಹಿತಿ ನೀಡಿದ ಆಹಾರ ಸಚಿವ ಉಮೇಶ ಕತ್ತಿ, ವಿಜಯಪುರದಲ್ಲಿ ಮಳೆ ಜಾಸ್ತಿಯಾಗಿದ್ದು, ಯಾವುದೇ ಹಾನಿಯಾಗಿಲ್ಲ ಎಂದು ತಿಳಿಸಿದರು.
ಮಾನವ ಜೀವಹಾನಿ ಆಗಿಲ್ಲ: ಒಂದು ವಾರದಿಂದ ಜಿಲ್ಲೆಯಲ್ಲಿ ವಾಡಿಕೆಗಿಂತ ಅ ಧಿಕ ಮಳೆಯಾಗಿದೆ. ಮೇ 15ರಿಂದ 21ರ ವರೆಗೆ 14 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 114 ಮಿ.ಮೀ ಮಳೆಯಾಗಿದ್ದು, ಯಾವುದೇ ಮಾನವ ಜೀವಹಾನಿಯಾಗಿಲ್ಲ. ಎರಡು ಜಾನುವಾರ ಮೃತಪಟ್ಟಿವೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದರು.
ಮೇ 15ರಿಂದ 21ರ ಅವಧಿಯಲ್ಲಿ 1 ಮನೆ ಪೂರ್ಣವಾಗಿ ಕುಸಿದಿದ್ದು, 193 ಮನೆಗಳು ಭಾಗಶಃ ಕುಸಿದಿವೆ. 30 ಹೆಕ್ಟೇರ್ ಕೃಷಿ ಬೆಳೆ ಮತ್ತು 15.3 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಹಾನಿಯಾಗಿದೆ. ಪ್ರವಾಹ ಪೀಡಿತಗೊಳ್ಳಬಹುದಾದ ತಾಲೂಕು, ಹೋಬಳಿ, ಗ್ರಾಮವಾರು ಮಾಹಿತಿ ಸಿದ್ಧಪಡಿಸಿ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ತಿಳಿಸಿ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಕಳಿಸಲಾಗಿದೆ ಎಂದು ತಿಳಿಸಿದರು.
ನಗರ ಪೊಲೀಸ್ ಆಯುಕ್ತ ಡಾ| ಎಂ.ಬಿ. ಬೋರಲಿಂಗಯ್ಯ, ಜಿಪಂ ಸಿಇಒ ದರ್ಶನ್ ಎಚ್.ವಿ., ಎಸ್‌ಪಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.