Advertisement
ಸರಣಿ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ನಡೆ ವಿರೋಧಿಸಿರುವ ಅವರು, ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ)ಅಡಿಯಲ್ಲಿ ನಡೆಯಲಿರುವ ಮುಕ್ತ ವ್ಯಾಪಾರ ಒಪ್ಪಂದ, ದೇಶದ ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ. ನರೇಂದ್ರ ಮೋದಿ ಸರ್ಕಾರದ ಈ ಪ್ರಯತ್ನ ರೈತರ ಪಾಲಿನ ಮರಣ ಶಾಸನವಾಗಲಿದೆ.
Related Articles
Advertisement
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕೇಂದ್ರದ ನಿರ್ಧಾರವನ್ನು ವಿರೋಧಿಸಿರುವುದನ್ನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಆರ್‌ಸಿಇಪಿ ಒಪ್ಪಂದ ವಿರೋಧಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆಬೆಂಗಳೂರು: ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ಗುರುವಾರ ನಡೆಯುವ ಆರ್‌ಸಿಇಪಿ ಒಪ್ಪಂದ ವಿರೋಧಿಸಿ ರೈತ ಸಂಘಟನೆಗಳು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿವೆ. ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ರೈತ ಸಂಘದ ಮುಖಂಡ ಡಾ.ಗುರುಪ್ರಸಾದ್, ಆರ್‌ಸಿಇಪಿ ಒಪ್ಪಂದವು ರೈತರ ಮರಣ ಶಾಸನವಾಗಿದ್ದು, ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಇದಕ್ಕೆ ಸಹಿ ಹಾಕಬಾರದು. ಭಾರತ ಈಗಾಗಲೇ ಏಷ್ಯಾ ಫೆಸಿಪಿಕ್, ಜಿಎಸ್‌ಟಿಪಿ, ಡಬ್ಲೂéಟಿಒ, ಗ್ಯಾಟ್ ಒಪ್ಪಂದಕ್ಕೆ ಸಹಿ ಹಾಕಿದ್ದರಿಂದ ನಮ್ಮ ಉತ್ಪನ್ನ ಹಾಗೂ ಮಾರು ಕಟ್ಟೆ ಎರಡನ್ನೂ ಕಳೆದುಕೊಂಡಿದ್ದೇವೆ. ಇದೀಗ ಆರ್‌ಸಿಇಪಿ ಮೂ ಲಕ ಬೇರೆ ರಾಷ್ಟ್ರಗಳು ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಭಾರತದ ಮಾರುಕಟ್ಟೆಗೆ ಸುರಿಯುವ ತಂತ್ರ ರೂಪಿಸಿವೆ ಎಂದು ದೂರಿದರು. ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾಗಳು ಉತ್ಪಾದಿಸುವ ಹಾಲಿನ ಉತ್ಪನ್ನಗಳಿಗೆ ಅಲ್ಲಿ ಮಾರುಕಟ್ಟೆ ಇಲ್ಲದೆ ಸಮುದ್ರಕ್ಕೆ ಚೆಲ್ಲಲಾಗುತ್ತಿದೆ. ಹೀಗಾಗಿ, ಭಾರತದಲ್ಲಿ ಅದನ್ನು ಮಾರುಕಟ್ಟೆ ಮಾಡುವ ಹುನ್ನಾರ ಅಡಗಿದೆ. ಕಾರ್ಪೋರೇಟ್ ಫ್ರೆಂಡ್ಲಿ ಯಾಗಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ಬೇರೆ ರಾಷ್ಟ್ರದ ಉತ್ಪನ್ನಗಳು ನಮ್ಮಲ್ಲಿಗೆ ಬಂದು, ಕಡಿಮೆ ಬೆಲೆಗೆ ಸಿಗುವಂತಾದರೆ ನಮ್ಮ ರೈತರು ಆತ್ಮ ಹತ್ಯೆಯ ದಾರಿ ಹಿಡಿಯಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಥಾಯ್ಲೆಂಡ್‌ನ ಬ್ಯಾಂಕಾಂಕ್‌ನಲ್ಲಿ ಅ.24ರಂದು ನಡೆಯುವ ಒಪ್ಪಂದ ವಿರೋ ಧಿ ಸಬೇಕು. ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಇದಕ್ಕೆ ಸಹಿ ಹಾಕ ಬಾರದು ಎಂದು ಒತ್ತಾಯಿಸಿ ರೈತ ಸಂಘಟನೆಗಳು ರಾಜ್ಯಾದ್ಯಂತ ಗುರುವಾರ ಹಮ್ಮಿ ಕೊಂ ಡಿರುವ ಪ್ರತಿಭಟನೆಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.