Advertisement

ದರಪಟ್ಟಿ ಪ್ರದರ್ಶಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಶಿಸ್ತು ಕ್ರಮದ ವರದಿ ನೀಡಲು ಸೂಚನೆ

09:31 PM Mar 03, 2024 | Team Udayavani |

ಬೆಂಗಳೂರು: ರಾಜ್ಯದ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಚಿಕಿತ್ಸಾ ದರಪಟ್ಟಿ ಆಳವಡಿಸಿರುವ ಕುರಿತು ಪರಿಶೀಲನೆ ಹಾಗೂ ತಪಾಸಣೆ ವೇಳೆ ದರಪಟ್ಟಿ ಆಳವಡಿಸದ ಸಂಸ್ಥೆಗಳ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾ.20ರೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

Advertisement

ಖಾಸಗಿ ಆಸ್ಪತ್ರೆಗಳು ರೋಗಿಗಳನ್ನು ಸುಲಿಗೆ ಮಾಡುತ್ತಿವೆ. ತಮಗೆ ಇಷ್ಟ ಬಂದಂತೆ ಚಿಕಿತ್ಸಾ ದರವನ್ನು ವಿಧಿಸುತ್ತಿವೆ ಎಂಬುದಾಗಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ದರಪಟ್ಟಿ ಆಳವಡಿಸಿದ ಬಗ್ಗೆ ತಪಾಸಣೆ ಮಾಡಿ, ವರದಿಯನ್ನು ಮಾ.20ರೊಳಗೆ dd2medical@gmail.com ಐಡಿಗೆ ಕಳುಹಿಸುವಂತೆ ಪ್ರಕಟನೆ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next