ಕಾರವಾರ: ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಮಂಜೂರಾತಿ ನೀಡಲಾಗಿರುವ ಎಲ್ಲ ಬಾಕಿ ಕಾಮಗಾರಿಗಳನ್ನು ಮೇ 30ರೊಳಗೆ ಪೂರ್ಣಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹರೀಶ್‌ಕುಮಾರ್ ಕೆ. ಸೂಚಿಸಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಹಳಿಯಾಳ ತಾಲೂಕಿನ ಕೈಗೊಂಡಿರುವ ವಿವಿಧ ಕಾಮಗಾರಿಗಳು ಹೆಚ್ಚು ಬಾಕಿ ಇದ್ದು ಶೀಘ್ರ ಪೂರ್ಣಗೊಳಿಸಬೇಕು. ಮುಂಗಾರು ಆರಂಭವಾಗುವ ಮುನ್ನ ಕಾಮಗಾರಿಗಳನ್ನು ಪೂರ್ಣಗೊಳಿಸಿದರೆ ಕುಡಿಯುವ ನೀರಿನ ಸಮಸ್ಯೆ ಇರುವೆಡೆ ಸಾರ್ವಜನಿಕರಿಗೆ ಉಪಯೋಗವಾಗಲಿದೆ ಎಂದರು.
ಜಿಲ್ಲಾ ನಿರ್ಮಿತಿ ಕೇಂದ್ರ ಹಾಗೂ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ವಿವಿಧ ಅಂಗನವಾಡಿ ಕಟ್ಟಡಗಳು, ಶಾಲಾ ಕಟ್ಟಡಗಳು, ರಸ್ತೆ ಕಾಮಗಾರಿಗಳು ಹಾಗೂ ಗ್ರಾಮ ಪಂಚಾಯ್ತಿ ಕಟ್ಟಡಗಳನ್ನು ಮಳೆ ಆರಂಭವಾಗುವ ಮುನ್ನ ಪೂರ್ಣಗೊಳಿಸಬೇಕು. ಅನುಮೋದನೆ ಪಡೆಯದೆ ಇರುವ ಕಾಮಗಾರಿಗಳಿಗೆ ವಾರದೊಳಗೆ ಅಂದಾಜು ಪಟ್ಟಿ ಸಲ್ಲಿಸಿ ಅನುಮೋದನೆ ಪಡೆಯಬೇಕು ಹಾಗೂ ಕಾಮಗಾರಿಗಳನ್ನು ಶೀಘ್ರ ಪೂರೈಸಬೇಕು ಎಂದು ಅವರು ಸೂಚಿಸಿದರು.
ಪ್ರಸ್ತುತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶದಲ್ಲಿ ಈ ಸಂಬಂಧಿಸಿದಂತೆ ಕೈಗೊಂಡಿರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು.
Advertisement
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಪ್ರಕೃತಿ ವಿಕೋಪ ಪರಿಹಾರ ನಿಧಿ ಅಡಿಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಪ್ರಸ್ತುತ ಅನುಮೋದನೆ ಪಡೆದು ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳನ್ನು ಮೇ 30ರೊಳಗೆ ಪೂರ್ಣಗೊಳಿಸಬೇಕು ಹಾಗೂ ಅದರ ಭೌತಿಕ ಹಾಗೂ ಆರ್ಥಿಕ ಅನುಷ್ಠಾನ ವರದಿಯನ್ನು ಸಲ್ಲಿಸುವಂತೆ ಅವರು ಸೂಚಿಸಿದರು.
Related Articles
Advertisement
ಅಪರ ಜಿಲ್ಲಾಧಿಕಾರಿ ನಾಗರಾಜ್ ಸಿಂಗ್ರೇರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ವಾಸುದೇವನ್, ಜಿಲ್ಲಾ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ಹರ್ಷ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಕಾರವಾರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎಂ.ವಿ. ಹೆಗಡೆ, ಶಿರಸಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಎ.ವಿ.ತೆಗ್ಗಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಿರಣ್ ಇದ್ದರು.
ಅನುಮೋದನೆ ಪಡೆಯಲು ಸೂಚನೆ:
ಜಿಲ್ಲಾ ನಿರ್ಮಿತಿ ಕೇಂದ್ರ ಹಾಗೂ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ವಿವಿಧ ಅಂಗನವಾಡಿ ಕಟ್ಟಡಗಳು, ಶಾಲಾ ಕಟ್ಟಡಗಳು, ರಸ್ತೆ ಕಾಮಗಾರಿಗಳು ಹಾಗೂ ಗ್ರಾಮ ಪಂಚಾಯ್ತಿ ಕಟ್ಟಡಗಳನ್ನು ಮಳೆ ಆರಂಭವಾಗುವ ಮುನ್ನ ಪೂರ್ಣಗೊಳಿಸಬೇಕು. ಅನುಮೋದನೆ ಪಡೆಯದೆ ಇರುವ ಕಾಮಗಾರಿಗಳಿಗೆ ವಾರದೊಳಗೆ ಅಂದಾಜು ಪಟ್ಟಿ ಸಲ್ಲಿಸಿ ಅನುಮೋದನೆ ಪಡೆಯಬೇಕು ಹಾಗೂ ಕಾಮಗಾರಿಗಳನ್ನು ಶೀಘ್ರ ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.