ನವದೆಹಲಿ: ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸಂಘಟನೆಯನ್ನು 5 ವರ್ಷಗಳ ಕಾಲ ನಿಷೇಧಿಸಿದನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ನ್ಯಾಯಾಧಿಕರಣ ದೃಢೀಕರಿಸಿದನ್ನು ಪ್ರಶ್ನಿಸಿ ಸಂಘಟನೆ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಪಿಎಫ್ಐ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಹಾಗೂ ಬಿ.ಎಂ.ತ್ರಿವೇದಿ ಅವರಿದ್ದ ನ್ಯಾಯಪೀಠ, ಅರ್ಜಿದಾರರು ನ್ಯಾಯಾಧಿಕರಣದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗುವ ಮುನ್ನ ಹೈಕೋರ್ಟ್‌ನಲ್ಲಿ ಈ ಕುರಿತು ಅರ್ಜಿ ಸಲ್ಲಿಸಬೇಕಾಗಿತ್ತು ಎಂದು ಹೇಳಿತು.
ಇದೇ ವೇಳೆ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಪೀಠ, ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿತು. 2022ರ ಸೆ.27ರಂದು ಕೇಂದ್ರ ಸರ್ಕಾರವು ಪಿಎಫ್ಐ ಸಂಘಟನೆಯನ್ನು ನಿಷೇಧಿಸಿತು.