Advertisement

ಶಿಕ್ಷಣ ಕಾಯ್ದೆಗೆ ತಡೆ ಕೋರಿ ರಿಟ್‌: ಸರ್ಕಾರಕ್ಕೆ ನೋಟಿಸ್‌

07:10 AM Jul 26, 2017 | Team Udayavani |

ಬೆಂಗಳೂರು: ಕರ್ನಾಟಕ ಶಿಕ್ಷಣ ತಿದ್ದುಪಡಿ ಕಾಯ್ದೆ -2017ಕ್ಕೆ ತಡೆ ನೀಡುವಂತೆ ಕೋರಿ ರಾಜ್ಯ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ ಸೇರಿದಂತೆ 8 ಖಾಸಗಿ ಶಾಲಾ ಆಡಳಿತ ಮಂಡಳಿಗಳು ಹೈಕೋರ್ಟ್‌ ಮೆಟ್ಟಿಲೇರಿವೆ.

Advertisement

ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್‌.ನಾರಾಯಣಸ್ವಾಮಿ ಅವರಿದ್ದ ಏಕ ಸದಸ್ಯ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ರಾಜ್ಯ ಸರ್ಕಾರ 1983ರ ಶಿಕ್ಷಣ ಕಾಯ್ದೆಗೆ ತಿದ್ದುಪಡಿ ಮಾಡಿ ಕರ್ನಾಟಕ ಶಿಕ್ಷಣ ಕಾಯ್ದೆ -2017 ಅನ್ನು ಏಪ್ರಿಲ್‌ 22ರಂದು ಜಾರಿಗೊಳಿಸಿದೆ. ಕಾಯ್ದೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ರಚಿಸಲಾಗಿದೆ. ಈ ಪ್ರಾಧಿಕಾರ, ಖಾಸಗಿ ಶಾಲೆಗಳು ನಿಯಮಾವಳಿ ಪಾಲಿಸದಿದ್ದಲ್ಲಿ ಸಂಬಂಧಪಟ್ಟ ಶಾಲೆಗೆ 10 ಲಕ್ಷ ರೂ. ಮೊತ್ತದ ದಂಡ ವಿಧಿಸುವ ಅಧಿಕಾರ ಹೊಂದಿದೆ. ಅದೇ ರೀತಿ ಶಾಲಾ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಲೋಪ ಕಂಡು ಬಂದರೆ ಆ ಸಂಸ್ಥೆಯ ಆಡಳಿತ ಮಂಡಳಿಗೆ 6 ತಿಂಗಳು ಜೈಲು ಹಾಗೂ 1 ಲಕ್ಷ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸಿದೆ.

ಆದರೆ ರಾಜ್ಯಸರ್ಕಾರಕ್ಕೆ ಅನುದಾನ ರಹಿತ ಖಾಸಗಿ ಶಾಲೆಗಳ ವಿರುದಟಛಿ ಕ್ರಮ ಜರುಗಿಸುವ ಯಾವುದೇ ಅಧಿಕಾರವಿಲ್ಲ. ತಡೆಯಾಜ್ಞೆ ನೀಡುವಂತೆ ಅರ್ಜಿದಾರರು ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next