Advertisement
ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಆವರು, ರ್ಯಾಪಿಡ್ ಟೆಸ್ಟ್ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಏನಾದರೂ ಕೊರತೆ ಕಂಡುಬಂದರೆ ತಕ್ಷಣ ಉಸ್ತುವಾರಿ ಸಚಿವರು ಅಥವಾ ತಮ್ಮ ಗಮನಕ್ಕೆ ತರಬೇಕು ಎಂದರು.
Related Articles
Advertisement
ಪ್ರತಿದಿನ ರಾಜ್ಯಮಟ್ಟದಲ್ಲಿ ನಿಗದಿತ ಗುರಿಯಂತೆ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಇದಲ್ಲದೇ ತುರ್ತು ಚಿಕಿತ್ಸೆ ಅಗತ್ಯವಿದ್ದಾಗ ಸರಕಾರಿ ವೈದ್ಯಕೀಯ ತಂಡ ಖಾಸಗಿ ಆಸ್ಪತ್ರೆಗೆ ತೆರಳಿ ಕೋವಿಡ್ ಪರೀಕ್ಷೆ ಮಾಡುತ್ತಿದೆ. ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ಯಾನೆಲ್ ನಲ್ಲಿ ಇರುವ ಜಿಲ್ಲೆಯ 47 ಆಸ್ಪತ್ರೆಗಳಿಗೆ ಈಗಾಗಲೇ ನಿಗದಿಪಡಿಸಿದ ದರದಂತೆ ಬಿಲ್ ಪಾವತಿಸಲಾಗುವುದು. ಇದಲ್ಲದೇ ಚಿಕಿತ್ಸೆಗೆ ಮುಂದಾಗುವ ಇತರೆ ಖಾಸಗಿ ಆಸ್ಪತ್ರೆಗಳಿಗೂ ಮಾರ್ಗಸೂಚಿ ಅನುಸರಿಸಿ ಅನುಮತಿ ನೀಡಲಾಗುವುದು ಎಂದರು. ಕಳೆದ ಬಾರಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಇನ್ನೆರಡು ದಿನಗಳಲ್ಲಿ ರಾಜೀವ ಗಾಂಧಿ ವಸತಿ ನಿಗಮದಿಂದ ಎರಡನೇ ಕಂತು ಕೂಡ ಬಿಡುಗಡೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಬಿಮ್ಸ್ ನಿರ್ದೇಶಕ ಡಾ| ವಿನಯ ದಾಸ್ತಿಕೊಪ್ಪ ಮಾತನಾಡಿ ಜಿಲ್ಲೆಯಲ್ಲಿ ಸದ್ಯ 371 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 96 ಜನರು ಮರಣ ಹೊಂದಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ 32 ವೆಂಟಿಲೇಟರ್ ಸೌಲಭ್ಯ ಇದೆ ಎಂದರು. ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ ನಸಿಂìಗ್ ಸಿಬ್ಬಂದಿ ಕೊರತೆ ಇರುವುದರಿಂದ ನಿರಂತರವಾಗಿ ಶಿಫ್ಟ್ ಆಧಾರದ ಮೇಲೆ ನಿರ್ವಹಿಸಲಾಗುತ್ತಿದೆ. ನಸಿಂìಗ್ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆದಿದೆ ಎಂದು ವಿವರಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಸ್.ವಿ.ಮುನ್ಯಾಳ ಮಾತನಾಡಿ ಕೋವಿಡ್-19 ಚಿಕಿತ್ಸೆಗೆ ಮುಂದಾಗುವ ಹಲವಾರು ಆಸ್ಪತ್ರೆಗಳ ವ್ಯವಸ್ಥೆಯನ್ನು ಈಗಾಗಲೇ ಪರಿಶೀಲಿಸಲಾಗಿದೆ. ನಿಯಮಾವಳಿ ಆಧರಿಸಿ ಅನುಮತಿ ನೀಡಲಾಗುವುದು ಎಂದು ಸಭೆಯಲ್ಲಿ ಶಾಸಕ ದುರ್ಯೋಧನ ಐಹೊಳೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕರ್ನಾಟಕ ನೀರಾವರಿ ನಿಗಮದ ಉತ್ತರ ವಲಯದ ಮುಖ್ಯ ಎಂಜಿನಿಯರ್ ಅರವಿಂದ ಕಣಗಲಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ, ಉಪಸ್ಥಿತರಿದ್ದರು.