Advertisement

ಕೋವಿಡ್‌ ಮಾರ್ಗಸೂಚಿ ಅನುಷ್ಠಾನಕ್ಕೆ ಸೂಚನೆ

04:14 PM Mar 27, 2021 | Team Udayavani |

ಗದಗ: ಕೋವಿಡ್‌ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬ ಉತ್ಸವಗಳ ಆಚರಣೆ ನಿರ್ಬಂಧಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದ್ದು, ಆದೇಶದಲ್ಲಿನಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್‌ ಬಾಬು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement

ಜಿಲ್ಲಾಡಳಿತ ಭವನದಲ್ಲಿ ಜರುಗಿದ ತಾಲೂಕು ಮಟ್ಟದ ಅಧಿಕಾರಿಗಳ ವಿಡಿಯೋ ಸಂವಾದ ಸಭೆಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್‌ ನಿಯಂತ್ರಣ ಕುರಿತು ಸರ್ಕಾರ ಹೊರಡಿಸಿದ ಹೊಸ ಆದೇಶದನ್ವಯ ಎಲ್ಲ ರೀತಿಯ ಹಬ್ಬ ಮತ್ತಿತರಧಾರ್ಮಿಕ ಆಚರಣೆಗಳನ್ನು ಮನೆಯಲ್ಲಿ ಆಚರಿಸಲು ಹಾಗೂ ಸಭೆ ಸಮಾರಂಭಗಳಿಗಾಗಿ ಜನ ಸೇರುವ ಸಂಖ್ಯೆ ನಿಗದಿಪಡಿಸಿದೆ. ಈ ಕುರಿತು ನಗರ, ಸ್ಥಳೀಯ ಸಂಸ್ಥೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಈ ಕುರಿತು ಜನಜಾಗೃತಿ ಮೂಡಿಸಲು ಅಗತ್ಯ ಕ್ರಮ ಜರುಗಿಸುವಂತೆ ತಿಳಿಸಿದರು.

ಮಾರ್ಗಸೂಚಿಗಳನ್ವಯ ಜನ ಸೇರದಂತೆನಿಯಂತ್ರಿಸುವುದು ಸವಾಲಿನ ಕೆಲಸವಾಗಿದ್ದು, ಈಕುರಿತು ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆಕಾರ್ಯ ನಿರ್ವಹಿಸಿ, ಹೆಚ್ಚು ಜನ ಸೇರದಂತೆ ಕ್ರಮವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಜರುಗುವ ಜಾತ್ರೆ, ಧಾರ್ಮಿಕ ಕಾರ್ಯಕ್ರಮ ಹಾಗೂ ಸಭೆಗಳ ಬಗ್ಗೆ ಪಿಡಿಒಗಳು ನಿಯಮಿತವಾಗಿ ನಿಗಾವಹಿಸಬೇಕು. ನಗರ ಪ್ರದೇಶಗಳಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಸ್ಥಳೀಯ ಸಂಸ್ಥೆ ಹಾಗೂ ಪೊಲೀಸ್‌ ಇಲಾಖೆಜಂಟಿಯಾಗಿ ನಿಯಮಿತವಾಗಿ ಗಸ್ತು ತಿರುಗಿ ಹೆಚ್ಚು ಜನ ಸೇರದಂತೆ, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಎಚ್ಚರಿಕೆ ನೀಡಬೇಕು ಎಂದರು.

ಜಿಪಂ ಸಿಇಒ ಭರತ ಎಸ್‌. ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸಭೆ ಸಮಾರಂಭ,ಧಾರ್ಮಿಕ ಕಾರ್ಯಕ್ರಮಗಳಿಗೆ ಹೆಚ್ಚು ಜನ ಸೇರದಂತೆ ಹಾಗೂ ಸರ್ಕಾರದ ಮಾರ್ಗಸೂಚಿಗಳ ಬಗ್ಗೆಸಾರ್ವಜನಿಕರಲ್ಲಿ ತಿಳಿವಳಿಕೆ ನೀಡಬೇಕು. ಆ ನಂತರ ದಂಡ ವಿಧಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿಲಸಿಕೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಿ ಲಸಿಕೆ ಪಡೆಯಲು ಅರ್ಹರಿರುವರನ್ನು ಲಸಿಕಾ ಕೇಂದ್ರಗಳಿಗೆಕರೆ ತರುವುದು ಪಿಡಿಒ, ತಾ.ಪಂ. ಇಒ ಹಾಗೂತಾಲೂಕು ವೈದ್ಯಾಧಿಕಾರಿಗಳು ಯೋಜನೆ ರೂಪಿಸಿ ಕ್ರಮ ಜರುಗಿಸುವಂತೆ ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌., ಅಪರ ಜಿಲ್ಲಾಧಿಕಾರಿ ಸತೀಶ್‌ ಕುಮಾರ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಸತೀಶ ಬಸರಿಗಿಡದ, ತಹಶೀಲ್ದಾರ್‌ ಶ್ರೀನಿವಾಸಮೂರ್ತಿ ಕುಲ್ಕರ್ಣಿ, ತಾಪಂ ಇಒ ಡಾ| ಎಚ್‌.ಎಸ್‌. ಜನಗಿ ಮತ್ತಿತರೆ ಅಧಿಕಾರಿಗಳು ಸಭೆಯಲ್ಲಿದ್ದರು.

Advertisement

ಪ್ರಕರಣ ದಾಖಲಿಸಿದಂಡ ವಿಧಿಸಿ :

ಸೋಂಕು ನಿಯಂತ್ರಣ ಕುರಿತು ಸರ್ಕಾರ ಹೊಡಿಸಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಸಭೆ, ಸಮಾರಂಭ ಆಯೋಜಿಸಿದ್ದು ಕಂಡುಬಂದಲ್ಲಿ ಕಾರ್ಯಕ್ರಮದ ಆಯೋಜಕರು ಹಾಗೂ ಕಾರ್ಯಕ್ರಮ ಜರುಗಿದ ಸ್ಥಳದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಬೇಕು. ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗದಂತೆ ನಿಯಂತ್ರಿಸಲು ಮಾರ್ಗಸೂಚಿಗಳನ್ನು ಅನುಷ್ಠಾನಕ್ಕೆ ತರುವುದು ಎಲ್ಲ ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಕಾರ್ಯನಿರ್ವಹಿಸಬೇಕು ಎಂದು ಡಿಸಿ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next