Advertisement

ಕಡ್ಡಾಯವಾಗಿ ಆಟೋ ಮೀಟರ್‌ ಅಳವಡಿಸಲು ಸೂಚನೆ

10:20 AM May 21, 2019 | Suhan S |

ಶಿವಮೊಗ್ಗ: ನಗರದಲ್ಲಿ ಅಟೋ ಮೀಟರ್‌ ಹಾಕದೆ ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಎಲ್ಲಾ ಅಟೋ ಚಾಲಕರು ಕಡ್ಡಾಯವಾಗಿ ಅಟೋ ಮೀಟರ್‌ ಹಾಕಬೇಕು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ್‌ ಸೂಚಿಸಿದರು.

Advertisement

ಸೋಮವಾರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಪ್ರಯಾಣಿಕರು ಹೇಳಿದರೆ ಮಾತ್ರ ಅಟೋ ಚಾಲಕರು ಮೀಟರ್‌ ಹಾಕುವಂತಹ ಪರಿಪಾಠವಿದೆ. ಇದು ಸಲ್ಲದು. ಕಡ್ಡಾಯವಾಗಿ ಪ್ರತಿ ಬಾರಿ ಮೀಟರ್‌ ಹಾಕಬೇಕು. ಎಲ್ಲ ಅಟೋಗಳಲ್ಲಿ ಚಾಲಕನ ಹೆಸರು, ವಿಳಾಸ, ಛಾಯಾಚಿತ್ರ, ಅಟೋ ವಿವರ ಸೇರಿದಂತೆ ಇನ್ನಿತರ ಮಾಹಿತಿ ಫಲಕ ಅಳವಡಿಸಬೇಕು ಎಂದರು.

ನಗರದಲ್ಲಿ ಅಟೋಗಳ ಸಂಖ್ಯೆ ನಿಯಂತ್ರಿಸುವ ಉದ್ದೇಶದಿಂದ ಇನ್ನು ಮುಂದೆ ಅಟೋ ಖರೀದಿಸುವ ಪೂರ್ವದಲ್ಲಿ ನೋಂದಣಿಗೆ ಅನುಮತಿ ನೀಡುವ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವ ಬಗ್ಗೆ ಪರಿಶೀಲಿಸಲು ಅವರು ಸೂಚನೆ ನೀಡಿದರು.

ಇಲೆಕ್ಟ್ರಿಕಲ್ ಆಟೋ ಅನುಮತಿ: ಶಿವಮೊಗ್ಗ ನಗರದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಪೂರಕವಾಗಿ ಇಲೆಕ್ಟ್ರಿಕಲ್ ಅಟೋ ಅನುಮತಿಯನ್ನು ಪ್ರಾಯೋಗಿಕವಾಗಿ ನೀಡಲಾಗುವುದು ಎಂದು ಅವರು ತಿಳಿಸಿದರು.

Advertisement

ಪ್ರೀ ಪೇಯ್ಡ ಕೌಂಟರ್‌: ರೈಲ್ವೆ ನಿಲ್ದಾಣದಲ್ಲಿ ಮುಂಗಡ ಪಾವತಿ ಅಟೋ ಕೌಂಟರ್‌ ಆರಂಭಿಸಲು ಅನುಮತಿ ನೀಡಲಾಗಿದೆ. ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮಿನಿ ಬಸ್‌ ಸೇವೆ ಆರಂಭಿಸಲು ಅನುಮತಿ ನೀಡಲಾಗುವುದು ಎಂದರು.

ಹಿರಿಯ ನಾಗರಿಕರ ಗುರುತಿನ ಚೀಟಿ ತೋರಿಸಿದರೂ ಕೆಲವು ಖಾಸಗಿ ಬಸ್‌ಗಳಲ್ಲಿ ರಿಯಾಯಿತಿ ನೀಡಲು ನಿರಾಕರಿಸಿರುವ ಬಗ್ಗೆ ದೂರುಗಳನ್ನು ಸ್ವೀಕರಿಸಲಾಗಿದ್ದು, ಅಂತಹ ಸಂಸ್ಥೆಗಳಿಗೆ ನೋಟೀಸ್‌ ಜಾರಿಗೊಳಿಸಬೇಕು. ಎಲ್ಲ ಬಸ್‌ ನಿಲ್ದಾಣಗಳಲ್ಲಿ ಅಂಗವಿಕಲ ಪ್ರಯಾಣಿಕರಿಗಾಗಿ ರ್‍ಯಾಂಪ್‌ ಹಾಗೂ ಗಾಲಿಕುರ್ಚಿ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅಶ್ವಿ‌ನಿ, ಪ್ರಾದೇಶಿಕ ಸಾರಿಗೆ ಜಂಟಿ ಆಯುಕ್ತ ಶಿವರಾಜ ಪಾಟೀಲ್, ವಿವಿಧ ಸಾರಿಗೆ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next