Advertisement

ಕೋವಿಡ್‌-19 ತಪಾಸಣೆ ಹೆಚ್ಚಿಸಲು ಸೂಚನೆ

12:30 PM Jun 30, 2020 | Suhan S |

ಧಾರವಾಡ: ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಗಳಂತೆ ವಿವಿಧ ಜನವರ್ಗಗಳನ್ನು ರ್‍ಯಾಂಡಮ್‌ ತಪಾಸಣೆಗೆ ಒಳಪಡಿಸಬೇಕು. ಅದಕ್ಕಾಗಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆದ್ಯತಾನುಸಾರ ತಪಾಸಣೆಗೆ ಜನರನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.

Advertisement

ಡಿಸಿ ಕಚೇರಿಯಲ್ಲಿ ಸೋಮವಾರ ನಡೆದ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ಮಾತನಾಡಿದ ಅವರು, ಪ್ರತಿದಿನ ಸರಾಸರಿ 250 ಜನರು ತಪಾಸಣೆಗೊಳಪಡುತ್ತಿದ್ದಾರೆ. ಪ್ರತಿದಿನ ಪ್ರಯೋಗಾಲಯದ ಸಂಪೂರ್ಣ ಸಾಮರ್ಥ್ಯಕ್ಕನುಗುಣವಾಗಿ ಹೆಚ್ಚು ತಪಾಸಣೆಗಳನ್ನು ತ್ವರಿತವಾಗಿ ನಡೆಸಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಕುರಿತು ಜನಜಾಗೃತಿ ಚಟುವಟಿಕೆಗಳು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳಬೇಕು ಎಂದರು.

ಅವಳಿನಗರದ ಸೀಲ್‌ಡೌನ್‌ ಪ್ರದೇಶಗಳಲ್ಲಿ ನಿಯಮಗಳ ಪ್ರಕಾರ ಸಮೀಕ್ಷೆ, ಸೋಂಕು ಲಕ್ಷಣಗಳಿರುವ ಜನರನ್ನು ತಪಾಸಣೆಗೆ ಒಳಪಡಿಸಬೇಕು. ಮಾಸ್ಕ್ ಧರಿಸದೇ ಓಡಾಡುವ ಜನರಿಗೆ ದಂಡ ವಿಧಿಸುವ ಕಾರ್ಯ ಚುರುಗೊಳಿಸಬೇಕು. ದಂಡ ವಿಧಿ ಸಿದ ನಂತರ ಅವರು ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಕುರಿತು ಜನಜಾಗೃತಿ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.

ಡಿಸಿ ದೀಪಾ ಚೋಳನ್‌ ಮಾತನಾಡಿ, ತೀವ್ರ ಉಸಿರಾಟದ ತೊಂದರೆ ಮತ್ತು ಗಂಭೀರ ಆರೋಗ್ಯ ಸಮಸ್ಯೆಗಳಿರುವ ರೋಗಿಗಳು ನೆರೆಯ ಜಿಲ್ಲೆಗಳಿಂದ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಐಎಲ್‌ಐ ಲಕ್ಷಣಗಳು ಇರುವವರನ್ನು ಗುರುತಿಸಿ ತಪಾಸಣೆಗೊಳಪಡಿಸಲಾಗುತ್ತಿದೆ ಎಂದರು.ಶಾಸಕರಾದ ಸಿ.ಎಂ. ನಿಂಬಣ್ಣವರ, ಅಮೃತ ದೇಸಾಯಿ, ಶಂಕರ ಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ಪೊಲೀಸ್‌ ಆಯುಕ್ತ ಆರ್‌. ದಿಲೀಪ, ಎಸ್‌ಪಿ ವರ್ತಿಕಾ ಕಟಿಯಾರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next