Advertisement

ಕೋವಿಡ್‌ ಲಸಿಕೆ ಪ್ರಮಾಣ ಹೆಚ್ಚಿಸಲು ಸೂಚನೆ

01:12 PM Mar 24, 2021 | Team Udayavani |

ಬೆಳಗಾವಿ: ಕೋವಿಡ್‌ ಲಸಿಕೆಯಿಂದಯಾವುದೇ ಅಡ್ಡ ಪರಿಣಾಮವಿಲ್ಲ ಎಂಬುದು ಖಚಿತವಾಗಿರುವುದರಿಂದ ಲಸಿಕೆ ಪಡೆಯಲು ಜನರು ಮುಂದೆ ಬರುತ್ತಿದ್ದಾರೆ. ಆದ್ದರಿಂದ ಈ ಸಂದರ್ಭವನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಎಲ್ಲರಿಗೂ ಲಸಿಕೆ ನೀಡಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಕೋವಿಡ್‌ ನಿಯಂತ್ರಣ ಮತ್ತು ಲಸಿಕಾಕರಣ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿಮಂಗಳವಾರ ಜಿಲ್ಲೆಯ ಎಲ್ಲ ತಹಶೀಲ್ದಾರ್‌ರ ಜೊತೆಗೆ ವಿಡಿಯೋ ಸಂವಾದ ನಡೆಸಿದ ಅವರುಲಸಿಕೆ ಹಾಕಿಸಿಕೊಳ್ಳಲು ಅನುಕೂಲವಾಗುವಂತೆ ಗ್ರಾಮೀಣ ಪ್ರದೇಶಗಳ ಜನರಿಗೆ ಸಾರಿಗೆ ವ್ಯವಸ್ಥೆ, ಮತ್ತಿತರ ಮೂಲ ಸೌಕರ್ಯವನ್ನು ಒದಗಿಸುವಮೂಲಕ ಲಸಿಕಾ ಕರಣ ಪ್ರಮಾಣವನ್ನು ಹೆಚ್ಚಿಸಬೇಕು ಎಂದರು.

ಇದಲ್ಲದೆ ಸೋಂಕಿತರ ಸಂಪರ್ಕಿತರನ್ನುಗುರುತಿಸಬೇಕು. ಪರೀಕ್ಷಾ ಪ್ರಮಾಣಹೆಚ್ಚಿಸಿ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಹೇಳಿದರು.

ಕೋವಿಡ್‌ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ವಿಪತ್ತು ನಿರ್ವಹಣಾಕಾಯ್ದೆಯಡಿ ಅವಕಾಶ ನೀಡಲಾಗಿದೆ. ಇದನ್ನುಬಳಸಿಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಬೇಕುಎಂದು ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್‌ರಿಗೆ ನಿರ್ದೇಶನ ನೀಡಿದರು.

ನೆರೆಯ ಮಹಾರಾಷ್ಟ್ರದಿಂದ ಜಿಲ್ಲೆಯಮೂಲಕ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರುಮಾರ್ಗಸೂಚಿ ಪ್ರಕಾರ ಕಡ್ಡಾಯವಾಗಿ ಆರ್‌.ಟಿ.ಪಿ.ಸಿ.ಆರ್‌. ಪರೀಕ್ಷಾ ವರದಿಯನ್ನುಹೊಂದಿರಬೇಕು. ಬಸ್‌ ಮೂಲಕ ಆಗಮಿಸುವಪ್ರಯಾಣಿಕರ ವರದಿಯನ್ನು ಬಸ್‌ನಿರ್ವಾಹಕರು ಪರಿಶೀಲಿಸುವುದರಿಂದ ಪರೀûಾ ವರದಿ ಇಲ್ಲದವರನ್ನು ತಡೆಯಬಹುದು ಎಂದರು.

Advertisement

ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ದರ್ಶನ್‌ಎಚ್‌.ವಿ., ಮಾತನಾಡಿ, ಜಿಲ್ಲೆಯ ಎಲ್ಲಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಾಗೂನಗರ ಪ್ರದೇಶದಲ್ಲಿ ಕೋವಿಡ್‌ ನಿಯಮಾವಳಿಉಲ್ಲಂಘಿಸುವವರ ವಿರುದ್ಧ ದಂಡ ಪ್ರಕ್ರಿಯೆಚುರುಕುಗೊಳಿಸಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಯೋಗೇಶ್ವರ್‌ ಎಸ್‌., ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ.ಎಸ್‌.ವಿ. ಮುನ್ಯಾಳ, ಜಿಲ್ಲಾ ಲಸಿಕಾಅಧಿಕಾರಿ ಡಾ.ಐ.ಪಿ.ಗಡಾದ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ,ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಜಿಲ್ಲಾಸರ್ವೇಕ್ಷಣಾಧಿಕಾರಿ ಡಾ.ಬಸವರಾಜ ತುಕ್ಕಾರ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next