Advertisement

ಅನುದಾನ ಬಳಕೆ ವರದಿ ನೀಡಲು ಸೂಚನೆ

04:00 PM Jan 28, 2021 | Nagendra Trasi |

ವಿಜಯಪುರ: ಜಿಲ್ಲೆಯ ಗಡಿ ಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಹೊಂದಿಕೊಂಡಿರುವ ತಾಲೂಕುಗಳಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ
ಸೂಕ್ತ ತಪಾಸಣೆ ನಡೆಸುವಂತೆ ಕರ್ನಾಟಕ ರಾಜ್ಯ ಗಡಿ ಪ್ರದೇಶ ಅಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಡಾ| ಸಿ.ಸೋಮಶೇಖರ ಸಂಬಂಧಪಟ್ಟ ಅ ಧಿಕಾರಿಗಳಿಗೆ
ಸೂಚನೆ ನೀಡಿದರು.

Advertisement

ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ ಮಂಜೂರಾದ ಅನುದಾನದ ಅಡಿ ಕೈಗೊಂಡ ಕಾಮಗಾರಿಗಳ ಬಗ್ಗೆ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಗಡಿ ಪ್ರದೇಶಾಭಿವೃದ್ಧಿ ಸ್ಥಾಪನೆಯಾದ ವರ್ಷ 2010ರಿಂದ ಈವರೆಗೆ ಕೈಗೊಂಡ ಕಾಮಗಾರಿ ಕುರಿತು ಸೂಕ್ತ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಲೋಕೋಪಯೋಗಿ, ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಸಂಸ್ಥೆಗಳ ಮೂಲಕ ಗಡಿ ಪ್ರದೇಶದಲ್ಲಿ ಕೈಗೊಂಡ ಕಾಮಗಾರಿಗಳ ಛಾಯಾಚಿತ್ರ ಸಹಿತ ವರದಿ ಮತ್ತು ಅನುದಾನ ಬಳಕೆ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಅ ಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಗಡಿ ಭಾಗದಲ್ಲಿ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಹಾಗೂ ಕನ್ನಡ ಮತ್ತು ಕನ್ನಡಿಗರ ಭದ್ರತೆಗೆ ವಿಶೇಷ ಗಮನ ನೀಡಬೇಕು. ಗಡಿ ಭಾಗ ಸೇರಿದಂತೆ ಮಹಾರಾಷ್ಟ್ರದ ಭಾಗದಲ್ಲಿರುವ ಕನ್ನಡಿಗರ ತಾಲೂಕುಗಳಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಸೂಕ್ತ ತಪಾಸಣೆ ನಡೆಸಬೇಕು.

ಗುಣಮಟ್ಟದ ಕಾಮಗಾರಿ ಮತ್ತು ಅನುದಾನದ ಸಮರ್ಪಕ ಬಳಕೆ ಕುರಿತು ಬಳಕೆ ಪ್ರಮಾಣ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕು. ಬರುವ ದಿನಗಳಲ್ಲಿ ರಸ್ತೆಗಳಿಗೆ ವಿವಿಧ ಮೂಲಗಳಿಂದ ಹೆಚ್ಚು ಅನುದಾನ ಲಭ್ಯವಿರುವುದರಿಂದ ಇದನ್ನು ಹೊರತುಪಡಿಸಿ ಸಾಂಸ್ಕೃತಿಕ ಭವನ, ಸಮುದಾಯ ಭವನ, ಕ್ರೀಡಾ ಮೈದಾನ, ಗ್ರಂಥಾಲಯ, ಶೌಚಾಲಯಗಳ ನಿರ್ಮಾಣ ಇಂತಹ ಅವಶ್ಯಕ ಮೂಲಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಗಮನ ನೀಡುವಂತೆ ಅವರು
ಸೂಚನೆ ನೀಡಿದರು.

Advertisement

2010ರಿಂದ ಈವರೆಗೆ ಗಡಿ ಪ್ರದೇಶಾಭಿವೃದ್ಧಿ ನಿಧಿ ಯಡಿ ಕೈಗೊಂಡ ಕಾಮಗಾರಿಗಳು ಮತ್ತು ಇದಕ್ಕೂ ಮುನ್ನ ಡಾ| ಡಿ.ಎಂ. ನಂಜುಂಡಪ್ಪ ವರದಿ ಆಧಾರಿತ ಕಾಮಗಾರಿಗಳ ಮತ್ತು ಅನುದಾನ ಬಳಕೆ ಬಗ್ಗೆಯೂ ಪರಿಶೀಲನೆ ನಡೆಸಬೇಕು. ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿಕೊಂಡಿರುವ ಅಕ್ಕಲಕೋಟ, ಜತ್ತ, ಉಮದಿ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆಯೂ ಅಲ್ಲಿನ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಪತ್ರ ಮೂಲಕ ಪರಿಶೀಲನೆಗೆ ಮನವಿ ಮಾಡಬೇಕು. ಇಲ್ಲಿಯ ಅ ಧಿಕಾರಿಗಳಿಂದ ಕಾಮಗಾರಿ ಪರಿಶೀಲನೆಗೆ ಅವಕಾಶ ನೀಡಲು ಸಹ ಕೋರುವಂತೆ
ಸೂಚಿಸಿದರು.

ಗಡಿ ಪ್ರದೇಶಾಭಿವೃದ್ಧಿ ಅನುದಾನದ ಅಡಿಯಲ್ಲಿ 184 ಕಾಮಗಾರಿ ಕೈಗೊಂಡಿದ್ದು 9 ಕೋಟಿ ರೂ. ಕಾಮಗಾರಿಗೆ ಸಂಬಂಧಪಟ್ಟಂತೆ ಈವರೆಗೆ ಅನುದಾನ
ಬಳಕೆ ಪ್ರಮಾಣ ಪತ್ರ ಕಳುಹಿಸಲಾಗಿಲ್ಲ. ಕಾರಣ ಈ ತಿಂಗಳಾತ್ಯಂಕ್ಕೆ ಅಥವಾ ಫೆಬ್ರುವರಿ ಮೊದಲ ವಾರದಲ್ಲಿ ಸಂಬಂಧಪಟ್ಟ ಇಲಾಖೆಗಳ ವ್ಯಾಪ್ತಿಯಲ್ಲಿ
ಕೈಗೊಂಡ ಕಾಮಗಾರಿ ಹಾಗೂ ಬಳಸಿದ ಅನುದಾನದ ಕುರಿತು ಕಡ್ಡಾಯವಾಗಿ ಪ್ರಮಾಣ ಪತ್ರ ಸಲ್ಲಿಸುವಂತೆ  ತಾಕೀತು ಮಾಡಿದರು.

ಗಡಿ ಅಭಿವೃದ್ಧಿ ಪ್ರಾ ಧಿಕಾರದಿಂದ ಬಿಡುಗಡೆಯಾದ ಅನುದಾನ, ಕಾಮಗಾರಿಗೆ ಬಳಸಲಾದ ಅನುದಾನದ ವಿವರ ಸಲ್ಲಿಸಬೇಕು. ಕೈಗೊಂಡ ಕಾಮಗಾರಿಗಳ ಬಗ್ಗೆ
ನೈಜ ಪರಿಶೀಲನಾ ವರದಿ ಸಲ್ಲಿಸುವಂತೆ ತಿಳಿಸಿದ ಅವರು, ಪ್ರಾಧಿಕಾರದಿಂದ ಕಡಿಮೆ ಪ್ರಮಾಣದ ಅನುದಾನ ಇರುವುದರಿಂದ ಇತರೆ ಇಲಾಖೆಗಳ
ಅನುದಾನದ ಅಡಿಯಲ್ಲಿಯೂ ಕಾಮಗಾರಿ ಕೈಗೆತ್ತಿಕೊಳ್ಳುವ ಬಗ್ಗೆ ವಿಶೇಷ ಗಮನ ನೀಡುವಂತೆ, ಜಿಲ್ಲಾ ನ್ಯಾಯಾಲಯದಲ್ಲಿ ಕುಡಿಯುವ ನೀರಿನ
ಸೌಲಭ್ಯ ಕಾಮಗಾರಿ ಕುರಿತು ಪರಿಶೀಲಿಸುವಂತೆಯೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಅಧ್ಯಕ್ಷ ನಂತರ ನಗರದ ಕಂದಗಲ್‌ ಹನುಮಂತರಾಯ ಜಿಲ್ಲಾ ರಂಗಮಂದಿರ ನವೀಕರಣ ಕಾಮಗಾರಿ ಪರಿಶೀಲನೆ ನಡೆಸಿ, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅಪರ ಜಿಲ್ಲಾ ಧಿಕಾರಿ ಡಾ| ಔದ್ರಾಮ್‌, ಉಪ ವಿಭಾಗಾ ಧಿಕಾರಿ ರಾಹುಲ್‌ ಸಿಂಧೆ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next