Advertisement

ರಾಜೀನಾಮೆ ನೀಡಿದ ಶಾಸಕರಿಗೆ ವಿಧಾನಸಭಾ ಕಾರ್ಯದರ್ಶಿ ನೋಟಿಸ್‌

06:45 AM Jan 21, 2018 | Team Udayavani |

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅದು ಅಂಗೀಕಾರವಾಗುವ ಮುನ್ನವೇ ಬಿಜೆಪಿ ಸೇರಿದ್ದ ಲಿಂಗಸಗೂರಿನ ಮಾನಪ್ಪ ವಜ್ಜಲ್‌ ಹಾಗೂ ರಾಯಚೂರಿನ ಡಾ. ಶಿವರಾಜ್‌ ಪಾಟೀಲ್‌ಗೆ ಸೋಮವಾರ ಸ್ಪೀಕರ್‌ ಕೆ.ಬಿ. ಕೋಳಿವಾಡ ಮುಂದೆ ಹಾಜರಾಗುವಂತೆ ವಿಧಾನಸಭಾ ಕಾರ್ಯದರ್ಶಿ ಎಸ್‌. ಮೂರ್ತಿ ನೋಟಿಸ್‌ ನೀಡಿದ್ದಾರೆ.

Advertisement

ರಾಜೀನಾಮೆಯನ್ನು ಖುದ್ದಾಗಿ ವಿಧಾನಸಭಾಧ್ಯಕ್ಷರಿಗೆ ನೀಡದಿರುವ ಹಿನ್ನೆಲೆಯಲ್ಲಿ ಹಾಜರಾತಿಗೆ ಸೂಚನೆ ನೀಡಲಾಗಿದೆ. ರಾಜೀನಾಮೆಯನ್ನು ಸ್ಪೀಕರ್‌ಗೆ ನೀಡುವ ಬದಲು ವಿಧಾನಸಭಾ ಕಾರ್ಯದರ್ಶಿಗೆ ನೀಡಿ ವಿಧಾನ ಮಂಡಲದ ನಿಯಮ ಉಲ್ಲಂಘಿಸಿದ್ದರು. ಅಲ್ಲದೆ, ರಾಜೀನಾಮೆ ಅಂಗೀಕಾರವಾಗುವ ಮುನ್ನವೇ ಬಿಜೆಪಿ ಸೇರ್ಪಡೆಯಾಗಿದ್ದರಿಂದ ಜೆಡಿಎಸ್‌ನ ಉಪಾಧ್ಯಕ್ಷ ಶರವಣ ಅವರು ಇಬ್ಬರು ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಸ್ಪೀಕರ್‌ಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜೀನಾಮೆಗೆ ಕಾರಣ ನೀಡುವಂತೆ ಹಾಗೂ ಸ್ಪೀಕರ್‌ ಮುಂದೆ ಹಾಜರಾಗಲು ಸೂಚನೆ ನೀಡಲಾಗಿದೆ. ಸಕಾರಣ ನೀಡಿದರೆ, ರಾಜೀನಾಮೆ ಅಂಗೀಕರಿಸುವ ಬಗ್ಗೆ ಸ್ಪೀಕರ್‌ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next