Advertisement

ಲೋಕಾಯುಕ್ತ ಮಧ್ಯಂತರ ವರದಿ ಮಂಡನೆಗೆ ಸೂಚನೆ

07:51 AM Jun 17, 2020 | Lakshmi GovindaRaj |

ಬೆಂಗಳೂರು: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ವರದಿ ಅನ್ವಯ ವಕ್ಫ್ ಆಸ್ತಿ ದುರ್ಬಳಕೆ ಕುರಿತಂತೆ ಲೋಕಾಯುಕ್ತ ತನಿಖೆ ಮಧ್ಯಂತರ ವರದಿಯನ್ನು ಮುಂದಿನ ವಿಧಾನಮಂಡಲ  ಅಧಿವೇಶನದಲ್ಲಿ ಮಂಡಿಸ ಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದರು.

Advertisement

ಗೃಹ ಕಚೇರಿ “ಕೃಷ್ಣಾ’ದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರಾಜ್ಯ ವಕ್ಫ್ ಮಂಡಳಿ ಹಾಗೂ ಜವಳಿ ಇಲಾಖೆ ಪ್ರಗತಿ  ಪರಿಶೀಲನಾ ಸಭೆ ನಡೆಸಿ, ವಕ್ಫ್ ಆಸ್ತಿ ದುರ್ಬಳಕೆ, ಒತ್ತುವರಿ ಸಂಬಂಧ ಅನ್ವರ್‌ ಮಾಣಿಪ್ಪಾಡಿ ವರದಿ ಅನ್ವಯ ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು. ಲೋಕಾಯುಕ್ತರು ಸಲ್ಲಿಸಿದ್ದ ಮಧ್ಯಂತರ ವರದಿ ವಿಧಾನ ಮಂಡಲದಲ್ಲಿ  ಮಂಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಮುಂದಿನ ಅಧಿವೇಶನದಲ್ಲಿ ವರದಿ ಮಂಡನೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು. ಕೋವಿಡ್‌- 19 ವೈರಸ್‌ ಹರಡುವಿಕೆ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಪವಿತ್ರ ಹಜ್‌ ಯಾತ್ರೆ  ಕುರಿತಂತೆ ಸೌದಿ ಅರೇಬಿಯಾದಿಂದ ಯಾವುದೇ ಮಾಹಿತಿ ಸ್ವೀಕೃತಿಯಾಗಿಲ್ಲ. ಪ್ರಸಕ್ತ ವರ್ಷದ ಯಾತ್ರಾರ್ಥಿಗಳು ಮುಂಗಡ ಹಣ ಹಿಂಪಡೆ ಯಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಮೇ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಮೂವರು ನೇಕಾರರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ವಿತರಿಸುವಂತೆ ಯಡಿಯೂರಪ್ಪ ಸೂಚನೆ ನೀಡಿದರು. ಸಚಿವರಾದ ಶ್ರೀಮಂತ ಪಾಟೀಲ್‌, ಪ್ರಭು ಚವ್ಹಾಣ್‌, ಮುಖ್ಯ ಕಾರ್ಯದರ್ಶಿ ಟಿ.ಎಂ.  ವಿಜಯ ಭಾಸ್ಕರ್‌, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆಯುಕ್ತ ಎ.ಬಿ.ಇಬ್ರಾಹಿಂ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಮಹೇಶ್ವರರಾವ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next