Advertisement

Politics: ಸಚಿವ ರಾಜಣ್ಣರಿಗೆ ನೋಟಿಸ್‌?

11:25 PM Sep 21, 2023 | Team Udayavani |

ಬೆಂಗಳೂರು: ಮೂರು ಉಪ ಮುಖ್ಯಮಂತ್ರಿಗಳನ್ನು ಮಾಡುವ ವಿಚಾರ ಹಾಗೂ ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರಕಾರ ವಿಸರ್ಜನೆ ಬಗ್ಗೆ ಹೇಳಿಕೆ ನೀಡಿದ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರಿಗೆ ಅಖೀಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಗುರುವಾರ ಶೋಕಾಸ್‌ ನೋಟಿಸ್‌ ಜಾರಿಯಾಗುವ ಸಾಧ್ಯತೆಗಳಿವೆ.

Advertisement

ಪಕ್ಷದ ಶಿಸ್ತು ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಶೋಕಾಸ್‌ ನೋಟಿಸ್‌ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ರಾಜಣ್ಣರಿಗೆ ನೋಟಿಸ್‌ ನೀಡಿದಲ್ಲಿ, ಕೇವಲ ಹತ್ತು ದಿನಗಳ ಅಂತರದಲ್ಲಿ ಕಾಂಗ್ರೆಸ್‌ ನೀಡುತ್ತಿರುವ ಎರಡನೇ ನೋಟಿಸ್‌ ಇದಾಗ ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿದ ಕಾರಣಕ್ಕೆ ಬಿ.ಕೆ. ಹರಿಪ್ರಸಾದ್‌ ಅವರಿಗೆ ಸೆ. 12ರಂದು ಎಐಸಿಸಿ ಶೋಕಾಸ್‌ ನೋಟಿಸ್‌ ನೀಡಿ, ಹತ್ತು ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿತ್ತು.

ಸಮುದಾಯವಾರು ಮೂವರು ಉಪಮುಖ್ಯಮಂತ್ರಿ (ಡಿಸಿಎಂ)ಗಳನ್ನು ಮಾಡಬೇಕು. ಲೋಕಸಭಾ ಚುನಾವಣೆ ಗೆಲುವಿಗೆ ಈ ಕ್ರಮ ಬಹಳ ಪ್ರಮುಖವಾದುದು ಎಂದು ರಾಜಣ್ಣ ಹೇಳಿದ್ದರು. ಬಳಿಕ ಈ ವಿಚಾರ ಪಕ್ಷದಲ್ಲಿ ತೀವ್ರ ಚರ್ಚೆಗೀಡಾಗಿ ಪರ-ವಿರೋಧಗಳು ವ್ಯಕ್ತವಾಗಿದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಂದ ಈ ಮಾತನ್ನು ಹೇಳಿಸುತ್ತಿದ್ದಾರೆ ಎಂಬ ಮಾತೂ ಕೇಳಿ ಬಂದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next