ಬೆಂಗಳೂರು: ಮಾಲವಿ ಜಲಾಶಯ ಯೋಜನೆಗೆ ಅಡ್ಡಿ ಪಡಿಸಿದ್ದಾರೆ ಎಂದು ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕಗೆ ಕಾರಣ ಕೇಳಿ ಕೆಪಿಸಿಸಿ ವತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ.
ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಮಾಲವಿ ಜಲಾಶಯ ನಿರ್ಮಾಣಕ್ಕೆ ಮುಜರಾಯಿ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ್ ಅಡ್ಡಿ ಪಡಿಸುತ್ತಿದ್ದು, ಯೋಜನೆ ಅನುಷ್ಠಾನಕ್ಕೆ ಕಮಿಷನ್ ಕೇಳುತ್ತಿದ್ದಾರೆಂದು ಆರೋಪಿಸಿದ್ದರು. ಇದು ಪಕ್ಷ ವಿರೋಧಿ ಚಟುವಟಿಕೆ ಎಂದು ಏಕೆ ಪರಿಗಣಿಸಬಾರದು ಎಂದು ಕಾರಣ ಕೇಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ. ವೈ. ಘೋರ್ಪಡೆ ನೋಟಿಸ್ ನೀಡಿದ್ದಾರೆ. ವಾರದಲ್ಲಿ ಸೂಕ್ತ ಕಾರಣ ನೀಡದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Advertisement