Advertisement

ಬೆಳಗ್ಗೆ 7ರಿಂದ ಜನೌಷಧ ಕೇಂದ್ರ ತೆರೆಯಲು ಸೂಚನೆ

01:12 AM Apr 14, 2020 | Sriram |

ಮಂಗಳೂರು: ಕೇಂದ್ರ ಸರಕಾರದ ಜನೋಪಯೋಗಿ ಯೋಜನೆಯಾದ ಜನೌಷಧಿ ಕೇಂದ್ರಗಳನ್ನು ಬೆಳಗ್ಗೆ 9 ಗಂಟೆಯ ಅನಂತರ ತೆರೆಯುತ್ತಿರುವುದರಿಂದ ಅನೇಕರಿಗೆ ತೊಂದರೆಯಾಗುತ್ತಿದೆ ಎಂಬ ದೂರು ಬರುತ್ತಿದ್ದು, ಎ. 14ರಿಂದ ಬೆಳಗ್ಗೆ 7 ಗಂಟೆಗೆ ತೆರೆಯಲು ಸೂಚನೆ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 34 ಹಾಗೂ ಉಡುಪಿ ಜಿಲ್ಲೆಯಲ್ಲಿ 27ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಸಮಯ ಹೊಂದಾಣಿಕೆಯಿಂದ ಮತ್ತಷ್ಟು ಜನಸಾಮಾನ್ಯರಿಗೆ ಕಡಿಮೆ ವೆಚ್ಚದಲ್ಲಿ ಔಷಧ ಸಿಗಲು ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next