ಬೆಂಗಳೂರು: ಅಧಿಕಾರದ ಪ್ರಮಾಣ ವಚನ ಸ್ವೀಕರಿಸಿದ ಮರು ದಿನವೇ ಎಂಟು ಮಂದಿ ನೂತನ ಸಂಸದೀಯ ಕಾರ್ಯದರ್ಶಿಗಳಿಗೆ ಶುಕ್ರವಾರ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ರಾಜ್ಯ ಸರಕಾರದ ಸಂಸದೀಯ ಕಾರ್ಯದರ್ಶಿಗಳ ಹು¨ªೆಗೆ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ನೇಮಿಸಿದ ಮುಖ್ಯಮಂತ್ರಿಗಳ ಕ್ರಮ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಎಲ್ಲ ಎಂಟು ಮಂದಿ ನೂತನ ಸಂಸದೀಯ ಕಾರ್ಯ ದರ್ಶಿಗಳು, ರಾಜ್ಯ ಸರ ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್ ಕೊಟ್ಟಿದೆ.
ಎಂ.ಬಿ. ಆದಿನಾರಾಯಣ ಸಲ್ಲಿ ಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಯನ್ನು ಹಂಗಾಮಿ ಮುಖ್ಯ ನ್ಯಾಯ ಮೂರ್ತಿ ಎಲ್. ನಾರಾಯಣ ಸ್ವಾಮಿ ಮತ್ತು ನ್ಯಾ| ಅರವಿಂದ್ ಕುಮಾರ್ ಅವರಿದ್ದ ನ್ಯಾಯ ಪೀಠ ವಿಚಾರಣೆ ನಡೆಸಿತು. ವಾದ ಆಲಿಸಿದ ನ್ಯಾಯಪೀಠವು ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.
ಎಂಟು ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ನೇಮಿಸಿದ್ದರು. ಈ ಸಂಬಂಧ ಜ.7ರಂದು ಸಂಸದೀಯ ವ್ಯವಹಾರಗಳ ಇಲಾಖೆ ಅಧಿಸೂಚನೆ ಹೊರಡಿಸಿತ್ತು.
ಸಂಸದೀಯ ಕಾರ್ಯದರ್ಶಿಗಳ ನೇಮಕಾತಿಯು ಸಂವಿಧಾನದ 164 (1-ಎ) ವಿಧಿಗೆ ವಿರುದ್ಧ ವಾಗಿದೆ. ಆದ್ದ ರಿಂದ ಎಲ್ಲ ಸಂಸದೀಯ ಕಾರ್ಯ ದರ್ಶಿ ಗಳನ್ನು ಅವರ ಹುದ್ದೆ ಯಿಂದ ವಜಾ ಗೊಳಿಸ ಬೇಕು. ಅರ್ಜಿ ಇತ್ಯರ್ಥ ಆಗುವ ವರೆಗೆ ಈ ಸಂಬಂಧದ ಅಧಿಸೂಚನೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.