Advertisement

ಕರ್ತವ್ಯ ಲೋಪದ ಹಿನ್ನೆಲೆ: ತಿಕೋಟಾ ಮೊರಾರ್ಜಿ ವಸತಿ ಶಾಲೆ ಪ್ರಾಚಾರ್ಯೆ, ವಾರ್ಡನ್ ಗೆ ನೋಟಿಸ್

09:48 AM Apr 02, 2021 | keerthan |

ವಿಜಯಪುರ: ಜಿಲ್ಲೆಯ ತಿಕೋಟಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಲ್ಲಿನ ಪ್ರಾಚಾರ್ಯೆ ಹಾಗೂ ನಿಲಯ ಪಾಲಕರಿಗೆ ನೋಟಿಸ್ ನೀಡಲಾಗಿದೆ.

Advertisement

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದುರವಸ್ಥೆ ಕುರಿತು ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ತಿಕೋಟಾ ತಾ.ಪಂ. ಅಧ್ಯಕ್ಷೆ ಪ್ರಭಾವತಿ ನಾಟೀಕರ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಅಹವಾಲು ಸ್ವೀಕರಿಸಿದ್ದರು. ಅಲ್ಲದೇ ವಸತಿ ಶಾಲೆಯ ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟ ಪರೀಕ್ಷೆಗಾಗಿ ವಿದ್ಯಾರ್ಥಿಗಳಿಗೆ ನೀಡುವ ಊಟವನ್ನೇ ಸೇವಿಸಿದ್ದರು.

ಇದನ್ನೂ ಓದಿ: ಗ್ರಾಮ ಪಂಚಾಯತ್‌ 14ನೇ ಹಣಕಾಸು ಯೋಜನೆ ಅನುದಾನ ಹಿಮ್ಮರಳುವುದಿಲ್ಲ:ಒಂದು ವರ್ಷಕ್ಕೆ ವಿಸ್ತರಣೆ!

ಈ ವೇಳೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರು ಸಮಯಕ್ಕೆ ಸರಿಯಾಗಿ ಶಾಲೆಗೆ ಬರುತ್ತಿಲ್ಲ, ಶಾಲೆ, ವಸತಿ ನಿಲಯದಲ್ಲಿ ಸ್ವಚ್ಛತೆ ಕಾಯ್ದುಕೊಂಡಿಲ್ಲ, ಹೀಗೆ ಕರ್ತವ್ಯ ಹಾಗೂ ಆಡಳಿತ ನಿರ್ವಹಣೆಯಲ್ಲಿ ಲೋಪ ಕಂಡು ಬಂದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು.

Advertisement

ಈ ಕುರಿತು ಉದಯವಾಣಿ ಪತ್ರಿಕೆ ಮಾ.31 ರಂದು ವರದಿ ಮಾಡಿ ಬೆಳಕು ಚಲ್ಲಿತ್ತು. ಇದನ್ನು ಆಧರಿಸಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಪ್ರಾಚಾರ್ಯೆ ಕೆ.ಕೆ.ದುಮ್ಮವಾಡ, ನಿಲಯ ಪಾಲಕ ಸೂರ್ಯಕಾಂತ ಹೊಸಮನಿ ಇವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ:ಪುಲ್ವಾಮಾದಲ್ಲಿ ಎನ್ ಕೌಂಟರ್: ಓರ್ವ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ

ನೋಟಿಸ್ ತಲುಪಿದ ಮೂರು ದಿನಗಳಲ್ಲಿ ಸಮರ್ಪಕ ಸ್ಪಷ್ಟೀಕರಣ ನೀಡದಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next