Advertisement
ನಗರದ ಫಿಲ್ಟರ್ ಬೆಡ್ ಕಾಲೋನಿಯಲ್ಲಿ ತಂದೆ ತಾಯಿಯನ್ನು ಕಳೆದುಕೊಂಡು ಅನಾಥ ಪ್ರಜ್ಞೆಯಲ್ಲಿದ್ದ ಮೂವರು ಮಕ್ಕಳ ಮಾಹಿತಿ ಅರಿತು ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ಭೇಟಿ ಮಾಡಿ ಕಾಲೋನಿ ನಾಗರಿಕರೊಂದಿಗೆ ಮತ್ತು ಶಾಲಾ ಶಿಕ್ಷಕರ ಜೊತೆ ಮಾತನಾಡಿ, ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಮಕ್ಕಳ ರಕ್ಷಣೆ ಕುರಿತು ಸರ್ಕಾರಿ ಸೌಲಭ್ಯ ಕಲ್ಪಿಸುವ ಬಗ್ಗೆ ಚರ್ಚಿಸಿದರು.
ಅನುಕೂಲ ಕಲ್ಪಿಸುವುದಾಗಿ ಭರವಸೆ ನೀಡಿದರು. ಬಾಲ ಕಾರ್ಮಿಕರ ಯೋಜನಾ ನಿರ್ದೇಶಕರ ಭೇಟಿ: ಅನಾಥ ಮಕ್ಕಳ ಸಮಗ್ರ ಮಾಹಿತಿ ಪಡೆದ ಜಿಲ್ಲಾಧಿಕಾರಿ ತಕ್ಷಣವೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಬಾಲ ಕಾರ್ಮಿಕ ಯೋಜನಾ ಇಲಾಖೆಯ ನಿರ್ದೇಶಕ ರಘುವೀರಸಿಂಗ್ ಠಾಕೂರ ಅವರನ್ನು ಮಕ್ಕಳ ವಾಸಿಸುವ ಸ್ಥಳಕ್ಕೆ ಭೇಟಿ ನೀಡಿ ಮಕ್ಕಳ ರಕ್ಷಣೆಗೆ ಬೇಕಾದ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಹಿನ್ನೆಲೆ ಠಾಕೂರ ಮತ್ತು ಇತರೆ ಇಲಾಖೆ ಅಧಿಕಾರಿಗಳು ಅನಾಥ ಮಕ್ಕಳನ್ನು ಭೇಟಿಯಾಗಿ ಸ್ಥಳದಲ್ಲಿದ್ದ ನಾಗರಿಕರೊಂದಿಗೆ ಚರ್ಚಿಸಿ ಸಂಬಂಧಿಸಿದ ದಾಖಲಾತಿಗಳು ಮತ್ತು ಇತರೆ ಸಮಗ್ರ ಮಾಹಿತಿ ಪಡೆದುಕೊಂಡರು.