Advertisement
ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಬಿದ್ದ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಮನೆ, ಬೆಳೆ ಹಾನಿಗೊಂಡು ಕಷ್ಟದಲ್ಲಿರುವವರಿಗೆ ತುರ್ತಾಗಿ ಸ್ಪಂದಿಸುವುದು ಸರ್ಕಾರದ ಕರ್ತವ್ಯ. ಹಾನಿಯ ಸಮೀಕ್ಷೆಯನ್ನು ಮೇ 25ರೊಳಗೆ ಪೂರ್ಣಗೊಳಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೆಳೆ ಹಾನಿಗೊಳಗಾದವರಿಗೆ ತುರ್ತಾಗಿ ಸ್ಪಂದಿಸುವಂತೆ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಹೇಳಿದರು.
Related Articles
Advertisement
ಬೆಳೆ ಪರಿಹಾರ ವಿತರಣೆಯಲ್ಲಿ ಅಕ್ರಮ ಎಸಗಿ ಅಮಾನತುಗೊಂಡಿದ್ದ ಅ ಧಿಕಾರಿಗಳು ಮತ್ತೆ ಅದೇ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ, ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಪ್ರತಿಕ್ರಿಯಿಸಿದರು.
ಸಿಎಂ ನಿರ್ಧಾರವೇ ಅಂತಿಮ: ಮುಂದಿನ ವರ್ಷ ಚುನಾವಣೆ ನಡೆಯುವುದರಿಂದ ಸ್ವಂತ ಜಿಲ್ಲೆಗೆ ಉಸ್ತುವಾರಿ ಜವಾಬ್ದಾರಿ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿರುವ ಕುರಿತು ಪ್ರತಿಕ್ರಿಯಿಸಿದ ಸಚಿವ ಶಿವರಾಮ ಹೆಬ್ಟಾರ್, ಈ ಬಗ್ಗೆ ಹಿಂದೆಯೇ ಚರ್ಚೆಯಾಗಿತ್ತು. ಮುಖ್ಯಮಂತ್ರಿಗಳೂ ಇದನ್ನೇ ಹೇಳಿದ್ದರು. ಆದರೆ, ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಬೇರೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಈ ಬಗ್ಗೆ ಸಿಎಂ ನಿರ್ಧಾರವೇ ಅಂತಿಮ ಎಂದು ಉತ್ತರಿಸಿದರು.
ಶಾಸಕ ನೆಹರು ಓಲೇಕಾರ ಮಾತನಾಡಿ, ಕಳೆದ ವರ್ಷ ನೆರೆಯಿಂದ ಮನೆ ಕಳೆದುಕೊಂಡವರಿಗೆ, ಬೆಳೆ ಹಾನಿ ಪರಿಹಾರದಲ್ಲಿ ಲೋಪವಾಗಿರುವುದು ಸತ್ಯ. ಆದರೆ, ಈ ಸಲ ಆ ರೀತಿ ಲೋಪವಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಅದಕ್ಕಾಗಿ ಸಮಿತಿ ರಚಿಸಲಾಗಿದ್ದು, ಪಾರದರ್ಶಕ ರೀತಿಯಲ್ಲಿ ಸಮೀಕ್ಷೆ ನಡೆಸಿ ನೇರವಾಗಿ ಫಲಾನುಭವಿಗಳಿಗೆ ಪರಿಹಾರ ಹಣ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಅರುಣಕುಮಾರ ಪೂಜಾರ, ವಿರುಪಾಕ್ಷಪ್ಪ ಬಳ್ಳಾರಿ ಇದ್ದರು.
ಮುಂಗಾರು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನಿದೆ. ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಕಳಪೆ ಬೀಜ, ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಾಡಿದ್ದು, ಗೊತ್ತಾದರೆ ಪರವಾನಗಿ ರದ್ದು ಮಾಡುವುದಾಗಿ ಕೃಷಿ ಸಚಿವರು ಎಚ್ಚರಿಕೆ ನೀಡಿದ್ದಾರೆ. ರೈತರು ಕೂಡ ಎಚ್ಚರಿಕೆ ವಹಿಸಬೇಕು. –ಶಿವರಾಮ ಹೆಬ್ಟಾರ, ಜಿಲ್ಲಾ ಉಸ್ತುವಾರಿ ಸಚಿವರು