ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ತೆಗೆದುಕೊಳ್ಳುವ ಪುನರಾವರ್ತಿತ ಅಭ್ಯರ್ಥಿಗಳ ವಿವರವನ್ನು ಆನ್‌ಲೈನ್‌ನಲ್ಲಿ ದಾಖಲಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಿಸಿದೆ.
ಜೂನ್ ತಿಂಗಳಲ್ಲಿ ನಡೆಯಲಿರುವ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಎಲ್ಲ
ಅಭ್ಯರ್ಥಿಗಳ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಕಡ್ಡಾಯವಾಗಿ ದಾಖಲಿಸಲು ಸೂಚನೆ ನೀಡಲಾಗಿತ್ತು.
ಕೆಲವೊಂದು ಕಾಲೇಜಿನವರು ಇನ್ನೂ ಆನ್‌ಲೈನ್‌ನಲ್ಲಿ ದಾಖಲಿಸಿರುವುದಿಲ್ಲ. ಮೇ 14ರ ಸಂಜೆ 5 ಗಂಟೆಯೊಳಗೆ ಪುನರಾವರ್ತಿತ ಅಭ್ಯರ್ಥಿಗಳ ಆನ್‌ಲೈನ್ ಪೋರ್ಟಲ್‌ನಲ್ಲಿ ವಿವರಗಳನ್ನು ದಾಖಲು ಮಾಡಬೇಕು.
ವಿವರಗಳನ್ನು ಆನ್‌ಲೈನ್ ಮೂಲಕ ದಾಖಲು ಮಾಡದ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ನೀಡುವುದಿಲ್ಲ. ಇದಕ್ಕೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರೇ ಇದಕ್ಕೆ ನೇರ ಹೊಣೆಯಾಗಿರುತ್ತಾರೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.