ಬೆಂಗಳೂರು: ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿರುವ ಅನುದಾನಿತ ಶಾಲೆಗಳಿಗೆ ನೋಟಿಸ್ ಜಾರಿ ಮಾಡಿ ಮಾನ್ಯತೆ ಹಿಂಪಡೆಯುವ ಸಂಬಂಧ ಸಕ್ಷಮ ಪ್ರಾಧಿಕಾರಕ್ಕೆ ಶಿಫಾರಸು ಸಲ್ಲಿಸುವಂತೆ ಜಿಲ್ಲಾ ಉಪ ನಿರ್ದೇಶಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.
ಪ್ರತಿ ತರಗತಿಯಲ್ಲಿ ಕನಿಷ್ಠ 25 ವಿದ್ಯಾರ್ಥಿಗಳು ಇರಬೇಕೆಂದು 1983ರ ಕರ್ನಾಟಕ ಶಿಕ್ಷಣ ಕಾಯ್ದೆ ಸ್ಪಷ್ಟವಾಗಿ ಹೇಳುತ್ತದೆ.
ಅನುದಾನಿತ ಶಾಲೆಗಳಲ್ಲಿರುವ ಕೆಲವು ಶಿಕ್ಷಕರಿಗೆ ಸರ್ಕಾರದಿಂದಲೇ ವೇತನ ನೀಡಲಾಗುತ್ತದೆ.
ಹೀಗಾಗಿ ಮಕ್ಕಳ ಸಂಖ್ಯೆ ಕಡಿಮೆಯಿದ್ದರೆ ಅಂತಹ ಶಾಲೆಗಳ ಮಾನ್ಯತೆ ರದ್ದತಿಗೆ ನೋಟಿಸ್ ನೀಡಬೇಕು. ಜತೆಗೆ ಅಲ್ಲಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲೂ ಪರೀಕ್ಷೆ ಬರೆಯಲು ತೊಂದರೆ ಆಗದಂತೆ ಬೇರೆ ಶಾಲೆಗಳ ಮೂಲಕ ನೋಂದಣಿ ಮಾಡಿಸಲು ಬೇಕಾದ ಕ್ರಮ ತೆಗೆದುಕೊಳ್ಳುವಂತೆಯೂ ಜಿಲ್ಲಾ ಉಪನಿರ್ದೇಶಕರಿಗೆ ಇಲಾಖೆ ನಿರ್ದೇಶಿಸಿದೆ. ವಿದ್ಯಾರ್ಥಿಗಳ ಸಂಖ್ಯೆಕಡಿಮೆಯಿರುವ ಅನುದಾನಿತ ಶಾಲೆಗಳ ಪಟ್ಟಿ ಸಿದಟಛಿಪಡಿಸುವಂತೆ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ತಿಳಿಸಲಾಗಿದೆ. ಅದರಂತೆ ಕೆಲವು ಜಿಲ್ಲೆಗಳ ಉಪನಿರ್ದೇಶಕರು ಪಟ್ಟಿ ಸಿದಟಛಿಪಡಿಸಿದ್ದು, ಇನ್ನೂ ಕೆಲ ಉಪನಿರ್ದೇಶಕರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸತತ ಮೂರ್‍ನಾಲ್ಕು ವರ್ಷಗಳಿಂದ ಮಕ್ಕಳ ಸಂಖ್ಯೆ ಕಡಿಮೆಯಿರುವ ಶಾಲೆಗಳ ಮಾನ್ಯತೆ ರದ್ದತಿಗೂ ಸಕ್ಷಮ ಪ್ರಾಧಿಕಾರದ ಮೂಲಕ ಕ್ರಮವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರೌಢ ಶಿಕ್ಷಣ ನಿರ್ದೇಶಕಿ ಫಿಲೋಮಿನಾ ಲೋಬೋ ಮಾಹಿತಿ ನೀಡಿದರು.
ಕರ್ನಾಟಕ ಶಿಕ್ಷಣ ಕಾಯ್ದೆ 1983ರ ನಿಯಮ 36ರ ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳು ಮಾನ್ಯತೆ ನವೀಕರಣ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಮಾನ್ಯತೆ ನವೀಕರಣ ಮಾಡದಿದ್ದರೆ ಆ ಶಾಲೆಗಳಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತದೆ. ವಿದ್ಯಾರ್ಥಿಗಳಿಗೆಯಾವುದೇ ರೀತಿಯಲ್ಲಿ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಮಾನ್ಯತೆ ನವೀಕರಿಸದೇ ಇರುವ ಶಾಲೆಗಳ ಪಟ್ಟಿ ಮಾಡಿ, ಮಾನ್ಯತೆ ನವೀಕರಣ ಕಡ್ಡಾಯವಾಗಿ ಮಾಡಿಸುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಿದ್ದೇವೆ ಎಂದರು. ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಯಾವುದೇ ಅನುದಾನನೀಡದೇ ಇರುವುದರಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಬಾರದೆಂದು ತರಗತಿಯಲ್ಲಿ 25 ಮಕ್ಕಳು ಇರಬೇಕೆಂಬ ನಿಯಮ ಸಡಿಲಗೊಳಿಸಿ ಮಾನ್ಯತೆ ನವೀಕರಿಸಲಾಗುತ್ತದೆ. ಆದರೆ, ಉಳಿದ ಎಲ್ಲ ಷರತ್ತುಗಳನ್ನೂ ಶಾಲಾಡಳಿತ ಮಂಡಳಿ ಕಡ್ಡಾಯವಾಗಿ ಪೂರೈಸಬೇಕೆಂದು ತಿಳಿಸಿದರು.