Advertisement

ಮೇ ಅಂತ್ಯದವರೆಗೂ ಕುಡಿಯುವ ನೀರು ಪೂರೈಸುವಂತೆ ಸೂಚನೆ

12:35 AM Jan 19, 2019 | |

ಬೆಂಗಳೂರು: ಬರಪೀಡಿತ ತಾಲೂಕುಗಳ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಟ್ಯಾಂಕರ್‌ ಮೂಲಕ ಮೇ ಅಂತ್ಯದವರೆಗೆ ಕುಡಿಯುವ ನೀರು ಸರಬರಾಜು ಮಾಡಲು ಸೂಚಿಸಲಾಗಿದೆ.

Advertisement

ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಬರ ನಿರ್ವಹಣೆ ಕುರಿತು ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ದೇಶಿಸಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ 156 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇರುವುದರಿಂದ ಮುಂದಿನ ದಿನಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗುವುದನ್ನು ಗಮನಿಸಿದ ಸಚಿವ ಸಂಪುಟ ಉಪ ಸಮಿತಿ ಡಿ.12ರಂದು ನಡೆದ ಸಭೆಯಲ್ಲಿ ವಿಪತ್ತು ಪರಿಹಾರ ನಿಧಿಯಡಿ ಕುಡಿಯುವ ನೀರು ಟ್ಯಾಂಕರ್‌ ಮೂಲಕ 90 ದಿನಗಳ ನಿರ್ಬಂಧ ಸಡಿಲಿಸಿ ಮೇ ಅಂತ್ಯದವರೆಗೆ ಪೂರೈಕೆ ಮಾಡಲು ನಿರ್ಣಯ ಕೈಗೊಂಡಿತ್ತು. ಅದರಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒಗಳಿಗೆ ಈ ಸೂಚನೆ ನೀಡಲಾಗಿದೆ .

ಬರ ಪೀಡಿತ ತಾಲೂಕುಗಳಲ್ಲಿ ಮೇವಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮವಾಗಿ ಮೇವು ಬೆಳೆಯಲು ಮೇವಿನ ಬೀಜದ ಮಿನಿ ಕಿಟ್‌ ಗಳ ಪೂರೈಕೆಗಾಗಿ 5 ಕೋಟಿ ರೂ. ಬಿಡುಗಡೆ ಮಾಡಲು ಸರ್ಕಾರ ಮಂಜೂರಾತಿ ನೀಡಿದೆ. ಈ ಹಣ ಯಾವ ಉದ್ದೇಶಕ್ಕೆ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ವೆಚ್ಚ ಮಾಡಬೇಕು ಮತ್ತು ವೆಚ್ಚ ಮಾಡಿದ್ದಕ್ಕೆ ಸಂಬಂಧಿಸಿದಂತೆ ಹಣ ಬಳಕೆ ಪತ್ರ ಕಡ್ಡಾಯವಾಗಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಸಭೆಯಲ್ಲಿ ಸಚಿವರಾದ ಜಮೀರ್‌ ಅಹಮದ್‌, ಕೃಷ್ಣಬೈರೇಗೌಡ ಮತ್ತಿತರರಿದ್ದರು.
 

Advertisement

Udayavani is now on Telegram. Click here to join our channel and stay updated with the latest news.

Next