Advertisement
ಸೋಮವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಂಗಳವಾರದಿಂದ ಶಾಲೆಗಳಿಗೆ ಶಿಕ್ಷಕರು ಹಾಜರಾಗಿ ಮಕ್ಕಳ ನೋಂದಣಿ ಪ್ರಾರಂಭಿಸಬೇಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಪೂರ್ಣಗೊಂಡ ನಂತರ ಶಿಕ್ಷಕರು ಶಾಲೆಗಳಿಗೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
Related Articles
Advertisement
ಕೊಠಡಿ ಮೇಲ್ವಿಚಾರಕ ಶಿಕ್ಷಕರಿಗೆ ಲಸಿಕೆ: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕೊಠಡಿ ಮೇಲ್ವಿಚಾರಕರುಗಳಿಗೆ ಕೋವಿಡ್- 19ರ ಲಸಿಕೆಯನ್ನು ನೀಡುವ ಪ್ರಕ್ರಿಯೆಯನ್ನು ಪರೀಕ್ಷೆಗೆ ಮುನ್ನ ಪೂರ್ಣಗೊಳಿಸುವಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯತೆ ಸಾಧಿಸಿ ಕ್ರಮ ವಹಿಸಬೇಕೆಂದೂ ಸೂಚಿಸಲಾಗಿದೆ ಎಂದೂ ಸಚಿವರು ಹೇಳಿದರು.
ಶೀಘ್ರದಲ್ಲೇ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ: ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯ ಕುರಿತಂತೆ ನಿಯಮಗಳ ಆಕ್ಷೇಪಣಾ ಸಲ್ಲಿಕೆ ಅವಧಿ ಪೂರ್ಣಗೊಳ್ಳುತಿರುವ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರದ ಅಧಿಸೂಚನೆಯನ್ನು ಹೊರಡಿಸಿ ಸಾಧ್ಯವಾದಷ್ಟು ಶೀಘ್ರವೇ ವರ್ಗಾವಣಾ ಪ್ರಕ್ರಿಯೆ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು. ಯಾವುದೇ ಅಡೆತಡೆಗಳು ಬಾರದ ರೀತಿಯಲ್ಲಿ ತಂತ್ರಜ್ಞಾನ ಆಧಾರಿತ ವರ್ಗಾವಣಾ ಪ್ರಕ್ರಿಯೆ ನಡೆಸಬೇಕೆಂದು ಸೂಚಿಸಲಾಗಿದೆ ಎಂದರು.
ಪ್ಯಾಕೇಜ್ ಪರಿಹಾರ ನೇರ ಶಿಕ್ಷಕರ ಖಾತೆಗೆ: ಖಾಸಗಿ ಖಾಸಗಿ ಶಾಲಾ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ಯಾಕೇಜ್ ಪರಿಹಾರವನ್ನು ಕ್ಲಪ್ತ ಸಮಯದಲ್ಲಿ ಫಲಾನುಭವಿಗಳಿಗೆ ನೇರವಾಗಿ ವಿತರಿಸುವ ಪ್ರಕ್ರಿಯೆಯನ್ನು ಕ್ಷಿಪ್ರಗೊಳಿಸಬೇಕೆಂದೂ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಿಕ್ಷಕರ, ಶಿಕ್ಷಕೇತರರ ಹಾಗೂ ಅತಿಥಿ ಶಿಕ್ಷಕರ ಬ್ಯಾಂಕ್‌ಖಾತೆಗಳ ವಿವರಗಳನ್ನು ಶೀಘ್ರ ಸಂಗ್ರಹಿಸಿ ಅನುದಾನವನ್ನು ನೇರ ಶಿಕ್ಷಕರ ಖಾತೆಗಳಿಗೆ ವರ್ಗಾಯಿಸಬೇಕು. ಅತ್ಯಂತ ಸಮರ್ಪಕವಾಗಿ ಈ ಪ್ರಕ್ರಿಯೆ ನಿರ್ವಹಣೆಯಾಗಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.