Advertisement

ಗ್ರಾಮಸಭೆಗೆ ಚಕ್ಕರ್‌ ಹಾಕಿದರೆ ನೋಟಿಸ್‌

06:25 AM Jan 16, 2019 | |

ಬೆಂಗಳೂರು: ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಭೆಗಳಿಗೆ ಗೈರು ಹಾಜರಾಗುವ ಅಧಿಕಾರಿಗಳಿಗೆ ಮೂಗುದಾರ ಹಾಕಲು ಬೆಂಗಳೂರು ನಗರ ಜಿಲ್ಲಾಡಳಿತ ಮುಂದಾಗಿದೆ.

Advertisement

ಗ್ರಾಮ ಸಭೆಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳುವುದಿಲ್ಲ ಎಂಬ ಆರೋಪಗಳು ಪದೇ ಪದೆ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಗೈರಾಗುವ ಅಧಿಕಾರಿಗಳಿಗೆ ನೋಟಿಸ್‌ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಗೈರು ಹಾಜರಾಗುವ ಅಧಿಕಾರಿಗಳ ಸಂಪೂರ್ಣ ಮಾಹಿತಿ ಕಲೆ ಹಾಕುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದೆ. ಅಲ್ಲದೆ, ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಕಟ್ಟುನಿಟ್ಟಾಗಿ ಸೂಚನೆ ನೀಡಿದೆ.
 
ಬೆಂಗಳೂರು ದಕ್ಷಿಣ ತಾಲೂಕಿನ ವ್ಯಾಪ್ತಿಗೆ ಬರುವ 18 ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಗ್ರಾಮ ಸಭೆಗಳಿಗೆ ಗೈರು ಹಾಜರಾಗದಂತೆ ಸೂಕ್ತ ನಿರ್ದೇಶನ ನೀಡಲಾಗಿದೆ. ಬೆಂಗಳೂರು ಪೂರ್ವ ತಾಲೂಕಿನ ದೊಡ್ಡನಹಳ್ಳಿ ಗ್ರಾಪಂ ಗ್ರಾಮ ಸಭೆಗೆ ರೇಷ್ಮೆ, ತೋಟಗಾರಿಕೆ, ಕೃಷಿ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗುತ್ತಿರುವುದು ಗಮನಕ್ಕೆ ಬಂದಿದೆ.

 ಜತಗೆ ಬಿದರಹಳ್ಳಿ, ಕನ್ನಮಂಗಲ, ಮಂಡೂರು, ಕಿತ್ತಗನೂರು ಮತ್ತು ಸೀಗೆಹಳ್ಳಿ ಗ್ರಾಮ ಪಂಚಾಯ್ತಿಯ ಗ್ರಾಮ ಸಭೆಗೆ ಬೆಸ್ಕಾಂ, ತೋಟಗಾರಿಕೆ, ಶಿಕ್ಷಣ ಮತ್ತು ಕೈಗಾರಿಕಾ ಇಲಾಖೆ ಅಧಿಕಾರಿಗಳು ಕೂಡ ಸಭೆಗೆ ಚಕ್ಕರ್‌ ಹೊಡೆಯುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅನೇಕಲ್‌ ತಾಲೂಕಿನ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸಭೆಗಳಿಗೂ ಅಧಿಕಾರಿಗಳು ಗೈರು ಹಾಜರಾಗಿದ್ದು ಈ ಸಂಬಂಧ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ಅನೇಕಲ್‌ ಪಂಚಾಯ್ತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಈಗಾಗಲೇ ನೋಟಿಸ್‌ ಜಾರಿ ಮಾಡಿದ್ದಾರೆ.

ನಾನು ಈ ಹಿಂದಿನ ಸಭೆಗೆ ಬಂದಿರಲಿಲ್ಲ: ಬೆಂಗಳೂರು ಜಿಲ್ಲಾಡಳಿತದ ವತಿಯಿಂದ ನಡೆಯುವ ಸಾಮಾನ್ಯ ಸಭೆಯಲ್ಲಿ ಹಲವು ಇಲಾಖೆಯ ಅಧಿಕಾರಿಗಳು ಭಾಗವಹಿಸುತ್ತಾರೆ. ಅವರಿಗೆ ಹಿಂದಿನ ಹಾಗೂ ಪ್ರಸ್ತುತ ಸಭೆಗಳ ಸರಿಯಾದ ಮಾಹಿತಿ ಇರುವುದಿಲ್ಲ.

ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿಯ ಬಗ್ಗೆ ಜಿಪಂ ಸದಸ್ಯರು ಮಾಹಿತಿ ಕೇಳಿದರೆ, ಸರ್‌, ನಾನು ಈ ಹಿಂದಿನ ಸಭೆಯಲ್ಲಿ ಬಂದಿರಲಿಲ್ಲ. ಈ ಹಿಂದೆ ಬಂದಿದ್ದ ಅಧಿಕಾರಿಗಳು ಅನ್ಯ ಕಾರ್ಯದ ನಿಮಿತ್ತ ಬೇರೆ ಕಡೆಗೆ ತೆರಳಿದ್ದಾರೆ ಹೀಗೆ ಅನೇಕ ಉತ್ತರಗಳನ್ನು ನೀಡಿ ಜಾರಿಕೊಳ್ಳುತ್ತಾರೆ. ಹೀಗಾಗಿ, ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಗೈರು ಹಾಜರಾದವರ ವಿರುದ್ಧ ಕಠಿಣ ಕ್ರಮಕ್ಕೆ ತೀರ್ಮಾನಿಸಿದೆ.

Advertisement

ಗ್ರಾಮ ಸಭೆಗೆ ಇಲಾಖಾವಾರು ಅಧಿಕಾರಿಗಳು ಪದೇ ಪದೆ ಗೈರು ಹಾಜರಾಗುತ್ತಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿದೆ.
-ಎಂ.ಎಸ್‌.ಅರ್ಚನಾ, ನಗರ ಜಿಪಂ ಸಿಇಒ

* ದೇವೇಶ ಸೂರಗುಪ್ಪ

Advertisement

Udayavani is now on Telegram. Click here to join our channel and stay updated with the latest news.

Next