Advertisement
ಇದೇ ಕಾರಣಕ್ಕಾಗಿ ಕೆಲವು ಹಾಲಿ ಸಚಿವರಿಗೆ ಅಗತ್ಯ ಬಿದ್ದರೆ, ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧರಾಗಿರಿ ಎಂಬ ಸಂದೇಶವನ್ನು ಕಾಂಗ್ರೆಸ್ ನಾಯಕರು ನೀಡಿದ್ದಾರೆ. ಪ್ರಮುಖವಾಗಿ ಹಿರಿಯ ಸಚಿವರಾಗಿ ರುವ ಆರ್.ವಿ. ದೇಶಪಾಂಡೆ, ಕೆ.ಜೆ.ಜಾರ್ಜ್ ಅವರಿಗೂ ಸರ್ಕಾರ ಉಳಿಸಿಕೊಳ್ಳಲು ಸಹಕಾರ ನೀಡುವಂತೆ ಹೈಕಮಾಂಡ್ ಮೂಲಕ ಸಂದೇಶ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
Related Articles
Advertisement
ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಡಾ.ಕೆ.ಸುಧಾಕರ್ ಅವರು ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬೆನ್ನಲ್ಲೇ ನಡೆದ ಈ ಭೇಟಿ ಕುತೂಹಲ ಮೂಡಿಸಿದೆ. ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹಮದ್ ಸಹ ಉಪಸ್ಥಿತರಿದ್ದರು.
ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಶಾಸಕರ ನಡೆ, ಆಪರೇಷನ್ ಕಮಲದ ಪ್ರಯತ್ನ, ಅದನ್ನು ತಡೆಯಲು ರೂಪಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದರು. ಬಿಜೆಪಿಯತ್ತ ದೃಷ್ಟಿ ಹಾಯಿಸಿರುವ ಕಾಂಗ್ರೆಸ್ ಶಾಸಕರನ್ನು ತಡೆಯುವ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಬಿಜೆಪಿ ಸಂಪರ್ಕದಲ್ಲಿರುವ ಶಾಸಕರನ್ನು ಕರೆದು ಖುದ್ದು ಮಾತನಾಡುವಂತೆ ಸಿದ್ದರಾಮಯ್ಯ ಅವರಿಗೂ ಸಿಎಂ ಮನವಿ ಮಾಡಿದರು. ಸಂಪುಟ ಪುನಾರಚನೆ ಬಗ್ಗೆಯೂ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾದ ಕೆಲವು ಶಾಸಕರನ್ನು ಅಲ್ಲಿಂದಲೇ ದೂರವಾಣಿ ಮೂಲಕ ಸಂಪರ್ಕಿಸಿ, ಮುಂದೆ ಉತ್ತಮ ಅವಕಾಶಗಳಿವೆ. ಬಿಜೆಪಿಯ ಆಮಿಷಗಳಿಗೆ ಬಲಿಯಾಗಬೇಡಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದರು.
ಸಿದ್ದರಾಮಯ್ಯ ಅವರ ಭೇಟಿಯ ನಂತರ ಸಚಿವ ಜಮೀರ್ ಅಹಮದ್ ಅವರೊಂದಿಗೂ ಕುಮಾರಸ್ವಾಮಿ ಪ್ರತ್ಯೇಕವಾಗಿ ಮಾತುಕತೆ ನಡೆಸಿ, ‘ಆಪರೇಷನ್ ಕಮಲ’ ಕಾರ್ಯಾಚರಣೆ ವಿಫಲಗೊಳಿಸುವ ಸಂಬಂಧ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.