ಬೀದರ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಈ ವಿಶೇಷ ಯೋಜನೆಗಳ ಪ್ರಗತಿಯಲ್ಲಿ ಶೇ.80ಗಿಂತ ಕಡಿಮೆ ಸಾಧನೆ ತೋರಿದ ಅಧಿಕಾರಿಗಳ ವಿರುದ್ಧ ನೋಟಿಸ್ ಜಾರಿ ಮಾಡಲು ಸೂಚನೆ ನೀಡಿದರು. ಮತ್ತು ಸಭೆಗೆ ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲು ತಿಳಿಸಿದರು.
ಪ್ರತಿ ತಿಂಗಳು 15ನೇ ತಾರೀಖೀನಂದು ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಸಭೆ ನಡೆಯುತ್ತದೆ. ಆ ದಿನದಂದು ರಜೆ ಇದ್ದಲ್ಲಿ ಮರು ದಿವಸ ಸಭೆ ನಡೆಯುತ್ತದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು ಎಂದರು.
ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಗಳ ಪ್ರಗತಿಯು ಜಿಲ್ಲೆಯಲ್ಲಿ ಶೇ.80ರಷ್ಟು ಆಗಿದ್ದು, ಮುಂಬರುವ ದಿನಗಳಲ್ಲಿ ಶೇ.90 ಪ್ರಗತಿ ಆಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಜಿಪಂ ಕಾರ್ಯ ನಿರ್ವಹಣಾಧಿಕಾರಿ ಜಹೀರಾ ನಸೀಮ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಯೋಗೇಶ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸರೋಜಾ ಇದ್ದರು.