Advertisement

ಶಾಲೆಗಳಲ್ಲಿ ಚಂದ್ರ ಗ್ರಹಣ ವೀಕ್ಷಿಸಲು ಸೂಚನೆ

11:59 AM Jan 26, 2018 | Team Udayavani |

ಬೆಂಗಳೂರು: ಭಾರತೀಯ ಖಭೌತ ಸಂಸ್ಥೆಯ ಹಿರಿಯ ವಿಜ್ಞಾನಿ ಪ್ರೊ.ಪ್ರಜ್ವಲ್‌ಶಾಸಿ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿಯು ಪತ್ರದ ಮೂಲಕ ಮನವಿ ಮಾಡಿಕೊಂಡಿರುವಂತೆ ಜ.31ರಂದು ಗೋಚರಿಸುವ ಸೂಪರ್‌ಮೂನ್‌ ಅನ್ನು ಶಾಲೆಯಲ್ಲಿ ಶಿಕ್ಷಕರು, ಮಕ್ಕಳು ಮತ್ತು ಅವರ ಪೋಷಕರು ವೀಕ್ಷಿಸಲು ಅನುಕೂಲ ಕಲ್ಪಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. 

Advertisement

ಪೂರ್ಣ ಚಂದ್ರ ಗ್ರಹಣವು ಚಂದ್ರೋದಯದ ಸಂದರ್ಭದಲ್ಲಿ ಸಂಭವಿಸುತ್ತದೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಶಿಕ್ಷಕರು ತಮ್ಮ ಶಾಲಾ ವಿದ್ಯಾರ್ಥಿಗಳು, ಅವರ ಪೋಷಕರು, ಎಸ್‌ಡಿಎಂಸಿ ಸದಸ್ಯರೊಂದಿಗೆ ಶಾಲೆಯಲ್ಲೇ ವೀಕ್ಷಿಸಬೇಕು.

ಇದರಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ಜತೆಗೆ ಖಗೋಳದ ಕೆಲವೊಂದು ವಿದ್ಯಮಾನ ಅರಿಯಲು ಸಾಧ್ಯವಾಗುತ್ತದೆ. ಹೀಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗ್ರಹಣ ವೀಕ್ಷಣೆಗೆ ಸೂಕ್ತ ಕ್ರಮ ವಹಿಸಬೇಕು ಎಂದು ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next