Advertisement

ಸಮರೋಪಾದಿ ಪರಿಹಾರ ಕಾರ್ಯಕ್ಕೆ ಸೂಚನೆ

06:40 AM Jun 03, 2018 | Team Udayavani |

ಬೆಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶನಿವಾರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

Advertisement

ಅಧಿಕಾರಿಗಳು ದಿನದ 24 ಗಂಟೆಯೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಸ್ಥಿತಿಗತಿ ವಿವರ ಹಾಗೂ ಬೆಳವಣಿಗೆಗಳ ಬಗ್ಗೆ ತಕ್ಷಣ ಮುಖ್ಯಮಂತ್ರಿಗಳ ಕಚೇರಿಗೆ ಮಾಹಿತಿ ರವಾನಿಸಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಎಲ್ಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣವೇ ಸಂಬಂಧ ಪಟ್ಟ ಜಿಲ್ಲೆಗಳಿಗೆ ತೆರಳಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ತ್ವರಿತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಅವಘಡಗಳು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ
ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ರಾಜ್ಯದ ಹಲವು ಪ್ರದೇಶಗಳಲ್ಲಿ ಸಾಕಷ್ಟು ಹಾನಿಯಾಗಿದೆ. ಮುಖ್ಯ
ವಾಗಿ ಬೆಳಗಾವಿ, ಗದಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು,
ಈ ಜಿಲ್ಲೆಗಳಲ್ಲಿ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.ಇದಕ್ಕೂ ಮೊದಲು ಮುಖ್ಯಮಂತ್ರಿಗಳು, ಮುಖ್ಯಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಸOಉತ ಚರ್ಚೆ ನಡೆಸಿ ಅಧಿಕಾರಿಗಳು ಹಾಗೂ ಜಿಲ್ಲಾಡಳಿತವು ತುರ್ತು ಪರಿಹಾರ ಕಾರ್ಯಕ್ಕೆ ಅಗತ್ಯ ಅನುದಾನ ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಎಲ್ಲ ಜಿಲ್ಲೆಗಳಲ್ಲಿ ಮಳೆ ಅನಾಹುತ ತಡೆಗೆ ಕೈಗೊಂಡಿರುವ ಕ್ರಮಗಳು ಹಾಗೂ ಎಲ್ಲ ಜಿಲ್ಲಾಧಿಕಾರಿಗಳ ಬಳಿಯೂ ತುರ್ತು ಪರಿಹಾರ ಕಾರ್ಯಕ್ಕೆ ಅಗತ್ಯವಾದ ಅನುದಾನ ಲಭ್ಯವಿರುವ ಮಾಹಿತಿಯನ್ನು ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ.

Advertisement

12 ದಿನದಲ್ಲಿ ಕೆಆರ್‌ಎಸ್‌ಗೆ 6 ಅಡಿ ನೀರು
ಮಂಡ್ಯ:
ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ನಲ್ಲಿ ಕಳೆದ 12 ದಿನದಲ್ಲಿ 6 ಅಡಿ ನೀರು ಹೆಚ್ಚಳವಾಗಿದೆ. ಕೆಆರ್‌ಎಸ್‌ ಜಲಾಶಯದ ಗರಿಷ್ಟ ಮಟ್ಟ 124.80 ಅಡಿ ಇದ್ದು, ಪ್ರಸ್ತುತ ಜಲಾಶಯದಲ್ಲಿ 75.55 ಅಡಿ ನೀರು ದಾಖಲಾಗಿದೆ. ಅಣೆಕಟ್ಟೆಗೆ 2,361 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದರೆ, ಅಣೆಕಟ್ಟೆಯಿಂದ 301 ಕ್ಯುಸೆಕ್‌ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಮೇ 20ರ ವೇಳೆಗೆ ಜಲಾಶಯದ ನೀರಿನ ಮಟ್ಟ 69.14 ಅಡಿಗೆ ಕುಸಿದಿತ್ತು.ಕಳೆದ ವರ್ಷ ಇದೇ ಅವಧಿಯಲ್ಲಿ ಕೆಆರ್‌ಎಸ್‌ನಲ್ಲಿ 68.31 ಅಡಿ ನೀರು ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next