Advertisement
5 ವರ್ಷಗಳಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆದಿರಲಿಲ್ಲ. ಪ್ರಸಕ್ತ ಸಾಲಿನಲ್ಲಿ ಎಲ್ಲ ವೃಂದಗಳಲ್ಲಿ ವರ್ಗಾವಣೆ ಪ್ರಕ್ರಿಯೆಯನ್ನು ಕೌನ್ಸೆಲಿಂಗ್ ಮೂಲಕ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದ್ದು ಜು.27 ರಂದು ಕೌನ್ಸೆಲಿಂಗ್ ನಡೆಯ ಲಿದೆ. ಪ್ರತಿವರ್ಷ ಎಪ್ರಿಲ್, ಮೇ ತಿಂಗಳಲ್ಲಿ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ನಡೆಯುತ್ತದೆ. ಆದರೆ ಈ ಬಾರಿ ಲೋಕಸಭೆ ಚುನಾವಣೆಯ ನೀತಿಸಂಹಿತೆ ಹಿನ್ನೆಲೆಯಲ್ಲಿ ಜೂನ್ ತಿಂಗಳಲ್ಲಿ ಪ್ರಕ್ರಿಯೆ ಆರಂಭವಾಗಿದೆ.
ಜೂ.15 ವರ್ಗಾವಣೆ ಅಧಿಸೂಚನೆ, ಜು. 6ರಿಂದ 10ರ ವರೆಗೆ ಅರ್ಜಿ ಸ್ವೀಕಾರ (ಐದು ದಿನಗಳ ಕಾಲಾವಕಾಶ), ಜುಲೈ 18 ವರ್ಗಾವಣೆ ಅರ್ಜಿಗಳ ತಾತ್ಕಾಲಿಕ ಪಟ್ಟಿ ಪ್ರಕನೆೆ, ಜು. 24 ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ (7 ದಿನ), ಜು.26 ಅಂತಿಮ ವರ್ಗಾವಣೆ ಪಟ್ಟಿ ಬಿಡುಗಡೆ, ಜು.27ರಂದು ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭ, ಜು.31 ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.