Advertisement

ಅನಧಿಕೃತ ಬ್ಯಾನರ್‌ ತೆರವಿಗೆ ಸೂಚನೆ

08:15 AM Feb 10, 2018 | Team Udayavani |

ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವ ತಯಾರಿ ಹಾಗೂ ಭದ್ರತೆ ದೃಷ್ಟಿಯಿಂದ ನಗರದಲ್ಲಿ ಅನಧಿಕೃತವಾಗಿ ಹಾಕಲಾಗಿರುವ ಬ್ಯಾನರ್‌ಗಳನ್ನು ತೆರವುಗೊಳಿಸಲು ದ.ಕ. ಜಿಲ್ಲಾಧಿಕಾರಿ ಡಾ| ಶಶಿಕಾಂತ ಸೆಂಥಿಲ್‌ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ ಹಾಲ್‌ನಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಚುನಾವಣೆ ಪೂರ್ವಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇನ್ನೆರಡು ತಿಂಗಳು ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆಯುವ ಕಾರ್ಯ ಕ್ರಮಗಳು, ಉತ್ಸವಗಳಿಗೆ ಸಂಬಂಧಪಟ್ಟ ಅಧಿಕಾರಿಗಳ ಅನುಮತಿ ಪಡೆದು ಬಂಟಿಂಗ್ಸ್‌ ಹಾಕಲು ಸೂಚನೆಯನ್ನು ನೀಡಿದರು. ಅನುಮತಿ ಪಡೆಯದವರ ಮೇಲೆ ಕ್ರಮ ಕೈಗೊಳ್ಳಲು ಹಾಗೂ ಅಂತಹ ಬ್ಯಾನರ್‌ಗಳನ್ನು ಮತ್ತು ಅವಧಿ ಮೀರಿದ ಬ್ಯಾನರ್‌ಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಸೂಚಿಸಿದರು.

ವಿವಿಪ್ಯಾಟ್‌ ಬಳಕೆ: ಈ ವರ್ಷವೂ ವಿದ್ಯುನ್ಮಾನ ಮತಯಂತ್ರಗಳ ಮೂಲಕ ಮತದಾನ ನಡೆಯಲಿದ್ದು, ಇದಕ್ಕೆ ಪೂರಕವಾಗಿ ವಿವಿ ಪ್ಯಾಟ್‌ಗಳನ್ನು ಬಳಸಲಾಗುತ್ತಿದೆ, ಲೋಪದೋಷಗಳು ಉಂಟಾಗದೆ ನಿಷ್ಪಕ್ಷ ಚುನಾವಣೆ ನಡೆಸಲು ಸಹಕರಿಸ ಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.  ಬೇಜವಾಬ್ದಾರಿಯಿಂದ ವರ್ತಿಸಿದರೆ ಹಾಗೂ ಕರ್ತವ್ಯ ವೇಳೆಯಲ್ಲಿ ಮೊಬೈಲ್‌ ಫೋನ್‌ ಬಳಸಿದ್ದು ಕಂಡುಬಂದಲ್ಲಿ ಅಂಥವರ ವಿರುದ್ಧ ಕಠಿನ ಕಾನೂನು ಕ್ರಮ ಜರಗಿಸುವುದಾಗಿ ಎಚ್ಚರಿಸಿದರು.

ಪ್ರಸಕ್ತ ವರ್ಷ ಆನ್‌ಲೈನ್‌ ಪೋರ್ಟಲ್‌ಗ‌ಳ ಮೂಲಕ ಅಂಕಿ ಅಂಶಗಳನ್ನು ದಾಖಲಿಸಬೇಕಿರುವುದರಿಂದ ಪ್ರತೀ ತಾಲೂಕಿನಲ್ಲಿ ಕಂಟ್ರೋಲ್‌ ರೂಂ ರಚಿಸಿ ಡಾಟಾ ಎಂಟ್ರಿ ಆಪರೇಟರ್‌ ಮೂಲಕ ಕಾರ್ಯನಿರ್ವಹಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next