Advertisement

ನೀರಿನ ಸಮಸ್ಯೆ ನಿವಾರಣೆಗೆ ಸೂಚನೆ

02:11 PM May 19, 2018 | Team Udayavani |

ವಡಗೇರಾ: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದರೆ ಕೂಡಲೇ ಜಿಲ್ಲಾಡಳಿತ ಗಮನಕ್ಕೆ ತರಬೇಕು
ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ ಹೇಳಿದರು.

Advertisement

ತಾಲೂಕಿನ ಕೊಂಕಲ್‌ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿದ ಬಳಿಕೆ ಗ್ರಾಮಸ್ಥರಿಗೆ ಹೇಳಿದರು. ಜಿಲ್ಲಾಡಳಿತವು ಬೇಸಿಗೆ ಕಾಲ ಆಗಿರುವುದರಿಂದ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು ಎಂದು ಎಲ್ಲಾ ರೀತಿಯ ಮುಂಜಾಗೃತ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಆಯಾ ವಿಭಾಗದ ಮುಖ್ಯಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದ ತಕ್ಷಣ ಅದಕ್ಕೆ ಸ್ಪಂದಿಸಿ ಕೂಡಲೇ ಕ್ರಮ
ಕೈಗೊಳ್ಳಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಗ್ರಾಮೀಣ ಭಾಗದ ಜನರು ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ತಕ್ಷಣ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲು ಅಗತ್ಯವಾದ ಅನುದಾನವನ್ನು ಒದಗಿಸಲಾಗುತ್ತದೆ.

ಗ್ರಾಮಸ್ಥರು ಸ್ವಚ್ಚತೆಯ ಬಗ್ಗೆ ಹೆಚ್ಚಿನ ಕಾಳಜಿ ತೊರಬೇಕು. ಒಂದು ವೇಳೆ ನಿರ್ಲಕ್ಷ ಮಾಡಿದರೆ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಇದನ್ನು ತಡೆಗಟ್ಟಬೇಕಾದರೆ ಎಲ್ಲರೂ ತಮ್ಮ ತಮ್ಮ ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಗ್ರಾಮಸ್ಥರಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮಸ್ಥರು ರಸ್ತೆ, ವಿದ್ಯುತ್‌, ಒಳಚರಂಡಿ ಹಾಗೂ ಇನ್ನಿತರ ಮೂಲಭೂತ ಸಮಸ್ಯೆಗಳ
ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮದ
ವಿವಿಧ ಬಡಾವಣೆಯ ನಿವಾಸಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next