Advertisement

ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜನೆಗೆ ಸೂಚನೆ

10:05 PM Jun 10, 2019 | Lakshmi GovindaRaj |

ಹಾಸನ: ಶಾಲಾ, ಕಾಲೇಜು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ವಿಶ್ವ ಯೋಗ ದಿನಾಚರಣೆಯನ್ನು ಅಚ್ಚುಕಟ್ಟಗಿ ಆಯೋಜಿಸಬೇಕೆಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆಗೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂ.21 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ವಿಶ್ವ ಯೋಗ ದಿನಾಚರಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಜೂ. 17 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿ ಆವರಣದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ಜಾಥಾ ಕಾರ್ಯಕ್ರಮ ಆಯೋಜಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ದೈಹಿಕ ಶಿಕ್ಷಕರಿಗೆ ತರಬೇತಿ ಅಗತ್ಯ: ವಿಶ್ವ ಯೋಗ ದಿನದಂದು ಪ್ರಸ್ತುತಪಡಿಸಲು ನಿಗದಿಪಡಿಸಿರುವ ಆಸನಗಳ ಬಗ್ಗೆ ಶಾಲಾ ಕಾಲೇಜು ಹಾಗೂ ವಸತಿ ಶಾಲೆಗಳ ದೈಹಿಕ ಶಿಕ್ಷಕರಿಗೆ ತರಬೇತಿ ನೀಡಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯವರಿಗೆ ನಿರ್ದೇಶನ ನೀಡಿದ ಅವರು, ಯೋಗ ದಿನಾಚರಣೆಯನ್ನು ಜೂ.21 ರಂದು ಎಲ್ಲ ಶಾಲಾ, ಕಾಲೇಜುಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ, ತಾಲೂಕು ಮಟ್ಟದಲ್ಲಿಯೂ ಅರ್ಥಪೂರ್ಣವಾಗಿ ಆಚರಿಸಲು ಸಿದ್ದತೆಗೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕ್ರೀಡಾಂಗಣದಲ್ಲಿ ಸೌಕರ್ಯ ಕಲ್ಪಿಸಿ: ವಿಶ್ವ ಯೋಗ ದಿನಾಚರಣೆಯಂದು ಕ್ರೀಡಾಂಗಣದಲ್ಲಿ ಕುಡಿಯುವ ನೀರು, ಸ್ವತ್ಛತೆ, ಲಘು ಉಪಹಾರ, ನೆಲಹಾಸಿಗೆ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ತಾಕೀತು ಮಾಡಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಗಿರೀಶ್‌ ಕಾರ್ನಾಡ್‌ ಅವರು ನಿಧನ ಹೊಂದಿದ ಹಿನ್ನಲೆಯಲ್ಲಿ 2 ನಿಮಿಷಗಳ ಕಾಲ ಸಭೆಯಲ್ಲಿ ಮೌನಾಚರಣೆಯ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಅಪರ ಜಿಲ್ಲಾಧಿಕಾರಿ ಎಂ.ಎಲ್‌ ವೈಶಾಲಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿಗಳಾದ ಪರಪ್ಪಸ್ವಾು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್‌ ಕುಮಾರ್‌ ಜಿಲ್ಲಾ ಆಯುಷ್‌ ಅಧಿಕಾರಿಗಳಾದ ಡಾ. ಪುಷ್ಪಾ, ವಿವಿಧ ಯೋಗ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Advertisement

ವಿವಿಧ ಯೋಜನೆಯಡಿ ಫ‌ಲಾನುಭಗಳಿಗೆ ನಿವೇಶನ ಒದಗಿಸಿ
ಹಾಸನ: ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ 7,388 ಅರ್ಹ ಫ‌ಲಾನುಭವಿಗಳಿಗೆ ವಿವಿಧ ವಸತಿ ಯೋಜನೆಯಡಿ ನಿವೇಶನ ಒದಗಿಸಲು ಆದ್ಯತೆಯನುದಾರ ಕೆಲಸ ನಿರ್ವಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ವಸತಿ ಯೋಜನೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ನಿವೇಶನ ಹಂಚಿಕೆಗೆ ಗುರುತಿಸಿರುವ ಸರ್ಕಾರದ ಜಮೀನು, ಗೋಮಾಳ ಹಾಗೂ ಖರೀದಿಸಿದ ಖಾಸಗಿ ಜಮೀನುಗಳನ್ನು ನಿವೇಶನಗಳನ್ನಾಗಿ ಮಾರ್ಪಡಿಸಿ ವಿತರಣೆಗೆ ಕ್ರಮ ಕೈಗೊಳ್ಳಬೇಕು. ನಿವೇಶನಗಳ ಹಂಚಿಕೆಗೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಸಿದರು.

ಒತ್ತುವರಿ ಜಾಗಗಳನ್ನು ಕೂಡಲೇ ತೆರವುಗೊಳಿಸಿ ಯಾವುದೇ ರೀತಿಯ ಕಾನೂನಾತ್ಮಕ ಸಮಸ್ಯೆಗಳಿದ್ದಲ್ಲಿ ಉಪವಿಭಾಗಾಧಿಕಾರಿಗಳ ಸಹಾಯ ಪಡೆಯಬೇಕು. ನಿವೇಶನಗಳ ಹಂಚಿಕೆಯಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು.

ಘನ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಪುರಸಭೆ ಮತ್ತು ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಸೂಚನೆ ನೀಡಿದರು. ಅಪರ ಜಿಲ್ಲಾಧಿಕಾರಿ ಎಂ.ಎಲ್‌ ವೈಶಾಲಿ, ಜಿಲ್ಲಾ ಪಂಚಾಯತಿಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ತಾಲೂಕು ಪಂಚಾತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next