Advertisement

ನೀತಿ ಸಂಹಿತೆ ಉಲ್ಲಂಘನೆ ಸುದ್ದಿ ಪ್ರಸಾರ ಬಗ್ಗೆ ನಿಗಾಕ್ಕೆ ಸೂಚನೆ

12:28 PM Oct 14, 2021 | Team Udayavani |

ವಿಜಯಪುರ: ಸಿಂದಗಿ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಮಾಧ್ಯಮಗಳ ಮೇಲೆ ನಿಗಾ ಇರಿಸಬೇಕು. ದೃಶ್ಯ ಹಾಗೂ ಪತ್ರಿಕಾ ಮಾಧ್ಯಮದಲ್ಲಿ ವರದಿ ಪ್ರಕಟವಾದ ತಕ್ಷಣ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿನ ದೂರು ಸ್ವೀಕಾರ ಕೇಂದ್ರಕ್ಕೆ ಮಾಹಿತಿ ರವಾನಿಸುವಂತೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಡಾ| ರಾಜಶೇಖರ ಸಂಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿಗೆ ತಿಳಿಸಿದ್ದಾರೆ.

Advertisement

ಮಾಧ್ಯಮ ನಿರ್ವಹಣಾ ಕೇಂದ್ರದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಮೀಡಿಯಾ ಮಾನಿಟರಿಂಗ್‌ ಸೆಲ್‌ನಲ್ಲಿ ನಿಯೋಜಿಸಿದ ಸಿಬ್ಬಂದಿ ಜೊತೆ ಸಭೆ ನಡೆಸಿದ ಅವರು, ಸಿಂದಗಿ ವಿಧಾನಸಭಾ ಉಪಚುನಾವಣೆಗೆ ಸಂಬಂಧಿ ಸಿದಂತೆ ನೀತಿ ಸಂಹಿತೆ ಉಲ್ಲಂಘನೆ, ಕೋವಿಡ್‌ ನಿಯಮಾವಳಿ ಉಲ್ಲಂಘನೆ ಸೇರಿದಂತೆ ಯಾವುದೇ ರೀತಿಯ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಸುದ್ದಿ ಪ್ರಸಾರವಾದಲ್ಲಿ ತಕ್ಷಣ ಮಾಹಿತಿ ರವಾನಿಸಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ದೂರು ಸ್ವೀಕಾರ ಕೇಂದ್ರಕ್ಕೆ ಮಾಹಿತಿ ನೀಡುವ ಮೂಲಕ ಸೂಕ್ತ ಕ್ರಮಕ್ಕೆ ನೆರವಾಗುವಂತೆ ತಿಳಿಸಿದರು.

ಸಿಂದಗಿ ವಿಧಾನಸಭಾ ಉಪಚುನಾವಣೆ ಪ್ರಚಾರಕ್ಕೆ ಸಂಬಂಧಪಟ್ಟಂತೆ ಎಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಪ್ರಚಾರ ಮಾಡಲು ಸಂಬಂಧಪಟ್ಟ ಅಭ್ಯರ್ಥಿಗಳು ಜಿಲ್ಲಾ ಮಾಧ್ಯಮ ದೃಢೀಕರಣ ಹಾಗೂ ಕಣ್ಗಾವಲು ಸಮಿತಿಯ ನಿಗದಿತ ನಮೂನೆಯಲ್ಲಿ ಅನುಮತಿ ಪಡೆಯಬೇಕು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಸ್ಥಾಪಿಸಲಾದ ಮಾಧ್ಯಮ ನಿರ್ವಹಣಾ ಕೇಂದ್ರದಲ್ಲಿ ಅರ್ಜಿ ಪಡೆದು, ನಿಯಮಾವಳಿ ಅನ್ವಯ ಸಲ್ಲಿಸಿ ಅನುಮತಿ ಪಡೆಯಬಹುದು. ಮುದ್ರಣ ಮಾಧ್ಯಮಕ್ಕೆ ಸಂಬಂಧಪಟ್ಟಂತೆ ಜಾಹೀರಾತು ನೀಡುವ ಮುಂಚಿತವಾಗಿ ಆಯಾ ಪಕ್ಷಗಳ ಪ್ರತಿನಿಧಿಗಳಾದಲ್ಲಿ ಆಯಾ ಪಕ್ಷದ ಅಭ್ಯರ್ಥಿಯ ಅನುಮತಿ ಪಡೆಯುವುದು ಕಡ್ಡಾಯ ಎಂದರು.

ಪಕ್ಷದ ಅಭ್ಯರ್ಥಿಯ ಮಾಹಿತಿ ಇಲ್ಲದೆ ಪ್ರಚಾರ ಜಾಹೀರಾತು ಪ್ರಕಟಿಸಬಾರದು. ಕಾರಣ ಮುದ್ರಕರು ಕಾನೂನಿನ ಅಡಿಯಲ್ಲಿ ಕಾರ್ಯ ನಿರ್ವಹಿಸಲು ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಜಾಹೀರಾತು ನೀಡಬೇಕಾದಲ್ಲಿ ಅಧಿಕೃತ ರಾಜಕೀಯ ಪಕ್ಷಕ್ಕೆ ಸಂಬಂಧಪಟ್ಟಂತೆ ಜಾಹೀರಾತು ವಿಷಯವನ್ನು ಮೂರು ದಿನ ಮೊದಲು ನಿಗದಿತ ನಮೂನೆಯ ಅರ್ಜಿ ಪಡೆದು ಜಿಲ್ಲಾ ಮಾಧ್ಯಮ ದೃಢೀಕರಣ ಹಾಗೂ ಕಣ್ಗಾವಲು ಸಮಿತಿಗೆ ಸಲ್ಲಿಸಿ ಅನುಮತಿ ಪಡೆಯಬೇಕು ಎಂದು ಸೂಚಿಸಿದರು.

ಇದನ್ನೂ ಓದಿ:  ಬಿಜೆಪಿ ಆಡಳಿತ ಇರುವ ರಾಜ್ಯಗಳಬಗ್ಗೆ ಮಾತ್ರ ಚರ್ಚೆ ಏಕೆ?

Advertisement

ಜಾಹೀರಾತಿಗಾಗಿ ನಿಗದಿತ ನಮೂನೆಯ ಅರ್ಜಿಯೊಂದಿಗೆ ಜಾಹೀರಾತಿನ ವಿಷಯವನ್ನೊಳಗೊಂಡ ಸಿಡಿ ರೂಪದಲ್ಲಿ ಅಥವಾ ಇತರೆ ಅವಶ್ಯಕ ದಾಖಲೆ ರೂಪದಲ್ಲಿ ಸಲ್ಲಿಸಬೇಕು. ಈ ಕುರಿತು ಸೂಕ್ತ ಪರಿಶೀಲನೆ ನಡೆಸಿ ಸಮಿತಿ ಅನುಮತಿ ನೀಡಲಿದೆ ಎಂದು ಹೇಳಿದರು.

ವಿವಿಧ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗುವ ಜಾಹೀರಾತುಗಳ ವೆಚ್ಚವನ್ನು ಆಯಾ ಅಕೌಂಟಿಂಗ್‌ ತಂಡ, ಎಕ್ಸಪೆಂಡಿಚರ್‌ ಅಬ್ಸರ್ವರ್‌ ತಂಡದ ಮೂಲಕ ಆಯಾ ಅಭ್ಯರ್ಥಿಗಳ ವೆಚ್ಚಕ್ಕೆ ಸೇರ್ಪಡೆ ಮಾಡಬೇಕು. ಸದರಿ ಚುನಾವಣೆಗಾಗಿ ಪ್ರತಿ ಅಭ್ಯರ್ಥಿಗೆ 30.80 ಲಕ್ಷ ರೂ. ವೆಚ್ಚ ಮಾಡಲು ಅವಕಾಶ ನೀಡಿ ಆಯೋಗ ನಿಗದಿಪಡಿಸಿದೆ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next