Advertisement
ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮ ಪಂಚಾಯತ್ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಶಾಸಕರ ನಡೆ ಹಳ್ಳಿಯ ಅಭಿವೃದ್ಧಿ ಕಡೆ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ವೈಯಕ್ತಿಕವಾಗಿ ಮತ್ತು ಗ್ರಾಮದಲ್ಲಿ ವಿವಿಧ ಸಮಸ್ಯೆಗಳನ್ನು ಮಂಡಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.
Related Articles
Advertisement
ಇದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದ್ದು ಕೇಳದರೆ ಸಂಬಂಧಪಟ್ಟ ಬೆಸ್ಕಾಂ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ತುರ್ತಾಗಿ ವಿದ್ಯುತ್ ಪರಿವರ್ತಕವನ್ನು ಅಳವಡಿಸುವಂತೆ ಸೂಚನೆ ನೀಡಬೇಕೆಂದು ಕಮಂಡಲಗೊಂದಿ ಗ್ರಾಮದ ಗ್ರಾಪಂ ಸದಸ್ಯ ಹುಲಿಯಪ್ಪರೆಡ್ಡಿ ಎನ್ನುವರು ಶಾಸಕರಲ್ಲಿ ಮನವಿ ಮಾಡಿದರು.
ಗ್ರಾಪಂ ಪ್ರಬಾರಿ ಪಿಡಿಒ ಮೂಗಣ್ಣ ಅವರಿಗೆ ಎರಡು ಪಂಚಾಯಿತಿಗಳ ಜವಾಬ್ದಾರಿ ನೀಡಲಾಗಿದೆ. ಇದರಿಂದ ಈ ಗ್ರಾಮಪಂಚಾಯಿತಿ ಕೆಲಸ ಕಾರ್ಯಗಳಿಗೆ ಅಡಚಣೆಯಾಗಿದ್ದು ಹಿರೇಮಲ್ಲನಹೊಳೆ ಗ್ರಾಮ ಪಂಚಾಯಿತಿಯಲ್ಲಿ ಮಾತ್ರ ಕಾರ್ಯಭಾರ ಮಾಡುವಂತೆ ಆದೇಶ ನೀಡಬೇಕೆಂದು ಕೆಲ ಸಾರ್ವಜನಿಕರು ಅವಲತ್ತುಕೊಂಡರು.
ಸಾರ್ವಜನಿಕ ಸಮಸ್ಯೆ ಆಲಿಸಿ ಮಾತನಾಡಿದ ಶಾಸಕ ಎಚ್.ಪಿ. ರಾಜೇಶ್, ಗ್ರಾಮೀಣ ಪ್ರದೇಶದಲ್ಲಿ ಇಂತಹ ಸಮಸ್ಯೆಗಳು ಸಾಕಷ್ಟಿವೆ ಎಂಬುದನ್ನು ತಿಳಿದು ರಾಜ್ಯ ಸರ್ಕಾರ ಶಾಸಕರ ನಡೆದ ಹಳ್ಳಿಯ ಅಭಿವೃದ್ಧಿಯ ಕಡೆ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಲ್ಲಿನ ಸಮಸ್ಯೆಗಳನ್ನು ಪಟ್ಟಿ ಮಾಡಿ ಕೂಡಲೇ ಬಗೆಹರಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.
ವಿಶೇಷ ಅಭಿವೃದ್ಧಿ ಯೋಜನೆಯಡಿ ಹಿರೇಮಲ್ಲನಹೊಳೆ, 30 ಲಕ್ಷ ರೂ. ಚಿಕ್ಕಮಲ್ಲನಹೊಳೆ 15 ಲಕ್ಷ ರೂ. ಮಲ್ಲಾಪುರ 15 ಲಕ್ಷ ರೂ. ಕಮಂಡಲಗೊಂದಿ 15 ಲಕ್ಷ ರೂ. ಸೇರಿದಂತೆ 75 ಲಕ್ಷದ ಮೊತ್ತದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಬಹುತೇಕ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ.
ದಿಬ್ಬದಹಳ್ಳಿ ಬಳಿ 2ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲಾಗಿದೆ. ಲೋಕೋಪಯೋಗಿ ಇಲಾಖೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಯ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಸಿಸಿ ರಸ್ತೆ ನಿರ್ಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಗ್ರಾಪಂ ಅಧ್ಯಕ್ಷ ಶೇಖರಪ್ಪ, ಎಪಿಎಂಸಿ ಸದಸ್ಯ ಎಸ್.ಕೆ.ರಾಮರೆಡ್ಡಿ, ಜಿ.ಪಂ. ಮಾಜಿ ಸದಸ್ಯ ಕೆ.ಪಿ.ಪಾಲಯ್ಯ, ತಹಶೀಲ್ದಾರ್ ಶ್ರೀಧರಮೂರ್ತಿ, ತಾಪಂ ಇಒ ಲಕ್ಷಿಪತಿ, ಶಿಶುಭಿವೃದ್ಧಿ ಯೋಜನಾಧಿಕಾರಿ ಭಾರತಿಬಣಕಾರ್, ಬೆಸ್ಕಾಂ ಎಇಇ ಸುಧಾಮಣಿ, ಗ್ರಾಪಂ ಸದಸ್ಯರಾದ ತಿಮ್ಮರಾಜ್, ಲೋಕೇಶ್, ಸೇರಿದಂತೆ ಮತ್ತಿತರರಿದ್ದರು.