Advertisement

ನ.17: ಕಸಾಪದಲ್ಲಿ ಭುವನೇಶ್ವರಿಯ ಪ್ರತಿಮೆ ಅನಾವರಣ

12:07 AM Nov 15, 2022 | Team Udayavani |

ಬೆಂಗಳೂರು: ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತು ಆವರಣದಲ್ಲಿ ನಿರ್ಮಿಸಿರುವ ಕನ್ನಡ ತಾಯಿ ಭುವನೇಶ್ವರಿಯ ಪ್ರತಿಮೆಯನ್ನು ನ.17ರಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಲಿದ್ದಾರೆ.

Advertisement

ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಕನ್ನಡ ಸಂಘ-ಸಂಸ್ಥೆಗಳು ಅಥವಾ ಸರಕಾರ ಭುವನೇಶ್ವರಿ ತಾಯಿಯ ಪ್ರತಿಮೆಯನ್ನು ಸ್ಥಾಪಿ ಸಿಲ್ಲ. ಕನ್ನಡ ಸಾಹಿತ್ಯ ಪರಿಷತ್ತು ಮೊತ್ತಮೊದಲ ಬಾರಿಗೆ 6.25 ಅಡಿ ಎತ್ತರದ ಪ್ರಭಾವಳಿ, ಚತುರ್ಭುಜವುಳ್ಳ ಪದ್ಮ ಪೀಠಾಸೀನ, ಪಾಶಾಂಕುಶ, ಅಭಿಯವರದ ಮುದ್ರೆಯೊಂದಿಗೆ ಕೈಯಲ್ಲಿ ಕನ್ನಡ ಧ್ವಜವನ್ನು ಹಿಡಿದಿರುವ ಭುವನೇಶ್ವರಿ ಪ್ರತಿಮೆಯನ್ನು ನಿರ್ಮಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಡೋಜ ಡಾ| ಮಹೇಶ ಜೋಷಿ ಅವರು ಪ್ರಕಟನೆಯಲ್ಲಿ ಅವರು ತಿಳಿಸಿದ್ದಾರೆ.

ಪ್ರತಿಮೆ ಅನಾವರಣ ಕಾರ್ಯ ಕ್ರಮದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಶ್ರೀಗಳ ಸಾನ್ನಿಧ್ಯದಲ್ಲಿ ನಡೆಯಲಿದ್ದು, ವಿಶ್ರಾಂತ ನ್ಯಾ| ಶಿವರಾಜ್‌ ವಿ.ಪಾಟೀಲ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ ಕುಮಾರ್‌, ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಟಾರ್‌, ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕಿ ಸಂಧ್ಯಾ ಎಸ್‌.ಪೈ. ಸಹಿತ ಅನೇಕರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next