Advertisement

Nov. 18: ಮಂಗಳೂರಿನಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ

11:27 PM Nov 06, 2023 | Team Udayavani |

ಮಂಗಳೂರು: ಭವಿಷ್ಯದ ಸಹಕಾರಿ ಚಳುವಳಿಯನ್ನು ಯಶಸ್ವಿಯಾಗಿ ಮುನ್ನಡೆಸುವ ಸಂಕಲ್ಪದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನೇತೃತ್ವದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ನ.18ರಂದು ಬೆಳಗ್ಗೆ 10ಕ್ಕೆ ನಗರದ ಉರ್ವ ಕ್ರಿಕೆಟ್‌ ಮೈದಾನದಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ತಿಳಿಸಿದರು.

Advertisement

ಬ್ಯಾಂಕಿನ ಸಭಾಂಗಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನ.14ರಿಂದ 20ರ ವರೆಗೆ ರಾಷ್ಟ್ರಾದ್ಯಂತ ಸಹಕಾರ ಸಪ್ತಾಹ ನಡೆಯಲಿದೆ. ನ.14ರಂದು ಸಪ್ತಾಹದ ಉದ್ಘಾಟನೆ ನಡೆಯಲಿದೆ. ಏಳು ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲಾಗುತ್ತದೆ. ಅದರಂತೆ, ದ.ಕ. ಜಿಲ್ಲೆಯಲ್ಲಿಯೂ ವಿವಿಧ ಕಡೆಗಳಲ್ಲಿ ಸಾಕಾರಗೊಳ್ಳಲಿದೆ. ಈ ಸಂಬಂಧ ವಿವಿಧ ಕಡೆಗಳಲ್ಲಿ ಸಹಕಾರ ರಥ ಸಂಚರಿಸಲಿದೆ ಎಂದರು.

ಮಂಗಳೂರಿನ ಉರ್ವ ಮೈದಾನದಲ್ಲಿ ನ.18ರಂದು ನಡೆಯುವ ಸಹಕಾರ ಸಪ್ತಾಹದಲ್ಲಿ ವಿಶೇಷವಾದ ವಸ್ತು ಪ್ರದರ್ಶನ ಮಳಿಗೆಗಳನ್ನು ಆಯೋಜಿಸಲಾಗಿದ್ದು ವಿಧಾನಸಭೆಯ ಸ್ಪೀಕರ್‌ ಯು.ಟಿ. ಖಾದರ್‌ ಉದ್ಘಾಟಿಸಲಿದ್ದಾರೆ. ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಅಧ್ಯಕ್ಷತೆಯಲ್ಲಿ ನಡೆಯುವ ಸಹಕಾರ ಸಪ್ತಾಹದ ಉದ್ಘಾಟನೆಯನ್ನು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ನೆರವೇರಿಸಲಿದ್ದಾರೆ. ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ನೆರವೇರಿಸಲಿದ್ದಾರೆ. ಉತ್ತಮ ಸ್ವಸಹಾಯ ಸಂಘಗಳಿಗೆ ಪುರಸ್ಕಾರವನ್ನು ಸಂಸದ ನಳಿನ್‌ ಕುಮಾರ್‌ ಕಟೀಲ್‌ ನೆರವೇರಿಸಲಿದ್ದಾರೆ. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ. ದೇವೇಗೌಡ ನೆರವೇರಿಸಲಿದ್ದಾರೆ ಎಂದರು.

ಶಾಸಕರಾದ ಡಾ| ವೈ. ಭರತ್‌ ಶೆಟ್ಟಿ, ಯಶ್‌ಪಾಲ್‌ ಸುವರ್ಣ, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಸಹಕಾರ ಇಲಾಖೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌, ಸಹಕಾರ ಸಂಘಗಳ ನಿಬಂಧಕ ಕ್ಯಾ| ಡಾ| ಕೆ. ರಾಜೇಂದ್ರ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ನಗರ ಪೊಲೀಸ್‌ ಅಧಿಕಾರಿ ಅನುಪಮ್‌ ಅಗರ್ವಾಲ್‌ ಭಾಗವಹಿಸಲಿರುವರು ಎಂದರು.

ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ| ಉಮೇಶ್‌, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಪ್ರಸಾದ್‌ ಕೌಶಲ್ ಶೆಟ್ಟಿ, ಬ್ಯಾಂಕಿನ ನಿರ್ದೇಶಕರುಗಳಾದ ದೇವಿಪ್ರಸಾದ್‌ ಶೆಟ್ಟಿ ಬೆಳಪು, ಶಶಿಕುಮಾರ್‌ ರೈ ಬಾಲೊÂàಟ್ಟು, ಎಂ.ವಾದಿರಾಜ ಶೆಟ್ಟಿ, ಜೈರಾಜ್‌ ಬಿ. ರೈ, ರಾಜು ಪೂಜಾರಿ, ಸದಾಶಿವ ಉಳ್ಳಾಲ್ , ಸ್ಕ್ಯಾಡ್ಸ್‌ ಅಧ್ಯಕ್ಷ ರವೀಂದ್ರ ಕಂಬಳಿ ಉಪಸ್ಥಿತರಿದ್ದರು.

Advertisement

ಸಾಂಸ್ಕೃತಿಕ ಕಲಾ ಪ್ರಕಾರದ “ಸಹಕಾರ ಜಾಥಾ’
ಡಾ|ಎಂ.ಎನ್‌. ರಾಜೇಂದ್ರ ಕುಮಾರ್‌ ಅವರು ಮಾತನಾಡಿ, ನ.18ರಂದು ಬೆಳಗ್ಗೆ 9ಕ್ಕೆ ಬ್ಯಾಂಕ್‌ ಆವರಣದಿಂದ ಉರ್ವ ಕ್ರಿಕೆಟ್‌ ಮೈದಾನದವರೆಗೆ ಭವ್ಯ ಸಹಕಾರ ಜಾಥಾ ಸಾಗಿ ಬರಲಿದೆ. 15ಕ್ಕೂ ಅಧಿಕ ವಿವಿಧ ಸಾಂಸ್ಕೃತಿಕ ಕಲಾ ಪ್ರಕಾರದ ಸಹಕಾರಿ ಟ್ಯಾಬ್ಲೋಗಳು ಜಾಥಾದಲ್ಲಿ ಪಾಲ್ಗೊಳ್ಳಲಿವೆ. ಶಾಸಕ ವೇದವ್ಯಾಸ ಕಾಮತ್‌ ಜಾಥಾಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next