Advertisement

ನ. 2: ಉಪರಾಷ್ಟ್ರಪತಿ ಮಂಗಳೂರಿಗೆ ತತ್‌ಕ್ಷಣ ಹೆದ್ದಾರಿ ದುರಸ್ತಿಗೆ ಡಿಸಿ ಸೂಚನೆ

11:29 PM Oct 30, 2019 | Team Udayavani |

ಮಂಗಳೂರು: ಸುರತ್ಕಲ್‌ ಎನ್‌ಐಟಿಕೆಯ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ನ. 2ರಂದು ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಕೂಳೂರಿನಿಂದ ಎನ್‌ಐಟಿಕೆ ವರೆಗಿನ ರಾಷ್ಟ್ರೀಯ ಹೆದ್ದಾರಿಯ ದುರಸ್ತಿಯನ್ನು ತತ್‌ಕ್ಷಣವೇ ಕೈಗೆತ್ತಿಕೊಳ್ಳುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಅವರು ಬುಧವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಉಪರಾಷ್ಟ್ರಪತಿಗಳ ಆಗಮನ ಪ್ರಯುಕ್ತ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವರೊಂದಿಗೆ ನಡೆದ ವೀಡಿಯೋ ಕಾನ್ಫರೆನ್ಸ್‌ ಸಭೆಯ ಬಳಿಕ ಅಧಿಕಾರಿಗಳೊಂದಿಗೆ ಮಾತನಾಡಿದರು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತ ಯಶವಂತ್‌ ಮಾಹಿತಿ ನೀಡಿ, ಹೆದ್ದಾರಿ ದುರಸ್ತಿ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ನಿರಂತರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲಾಗುತ್ತದೆ. ಎನ್‌ಐಟಿಕೆಯಿಂದ ಕದ್ರಿಯ ಸಕೀìಟ್‌ ಹೌಸ್‌ ವರೆಗೆ 3 ಭಾಗಗಳನ್ನಾಗಿ ಮಾಡಿ, ಪ್ರತ್ಯೇಕ ಏಜೆನ್ಸಿಗಳ ಮೂಲಕ ದುರಸ್ತಿ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು. ಭದ್ರತೆ, ಸಂಚಾರ, ಆಹಾರ, ಸಭೆ ನಡೆಯುವ ಸ್ಥಳ, ಮಾಧ್ಯಮ ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಆಯಾ ಇಲಾಖಾಧಿಕಾರಿಗಳಿಂದ ಮಾಹಿತಿ ಪಡೆದರು.

ಪೊಲೀಸ್‌ ಆಯುಕ್ತ ಡಾ| ಪಿ.ಎಸ್‌. ಹರ್ಷ, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪ, ಎನ್‌ಐಟಿಕೆ ನಿರ್ದೇಶಕ ಉಮಾಮಹೇಶ್ವರ ರಾವ್‌, ವಿಮಾನ ನಿಲ್ದಾಣ ನಿರ್ದೇಶಕ ವಿ.ವಿ. ರಾವ್‌ ಮೊದಲಾದವರು ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next