ಬೆಳ್ತಂಗಡಿ: ಕಾರ್ತಿಕ ಮಾಸದ ಮಂಗಳ ಬಹುಳ ಏಕಾದಶಿಯಿಂದ ಅಮಾವಾಸ್ಯೆಯವರೆಗಿನ ಮಂಗಳ ಪರ್ವದಲ್ಲಿ ಕನ್ನಡ ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ, ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ ನ.30ರವರೆಗೆ ಜರಗಲಿದೆ.
Advertisement
ನ.26ರಂದು ಮಂಗಳವಾರ 3 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯಕೆ.ಪ್ರತಾಪಸಿಂಹ ನಾಯಕ್, ಮಾಜಿ ಸದಸ್ಯ ಹರೀಶ್ ಕುಮಾರ್ ನೇತೃತ್ವದಲ್ಲಿ 25,000ಕ್ಕೂ ಮಿಕ್ಕಿ ಊರ-ಪರವೂರಿನ ಭಕ್ತರು, ಅಭಿಮಾನಿಗಳು ಪಾದಯಾತ್ರೆಯಲ್ಲಿ ಪ್ರಾರ್ಥನೆ ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಬಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿದ್ದಾರೆ.
Related Articles
Advertisement
ಸಾಹಿತ್ಯ ಸಮ್ಮೇಳನ: ನ.30ರಂದು ಸಂಜೆ 5 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದ್ದು ಬೆಂಗಳೂರು ಬಹುಶ್ರುತ ವಿದ್ವಾಂಸ ಶತಾವಧಾನೀ ಡಾ. ರಾ. ಗಣೇಶ ಉದ್ಘಾಟಿಸುವರು. ಲೇಖಕ, ಸಂಶೋಧಕ ಡಾ. ಪಾದೇಕಲ್ಲು ವಿಷ್ಣು ಭಟ್ಟ ಅಧ್ಯಕ್ಷತೆ ವಹಿಸುವರು. ಬಳಿಕ ಡಾ. ಪ್ರಮೀಳಾ ಮಾಧವ, ಡಾ. ಬಿ.ವಿ.ವಸಂತ ಕುಮಾರ್, ಪ್ರೊ. ಮೊರಬದ ಮಲ್ಲಿಕಾರ್ಜುನ ಅವರಿಂದ ಉಪನ್ಯಾಸ ನಡೆಯಲಿದೆ. ಸಾಂಸ್ಕೃತಿಕ ಕಾರ್ಯ ಕ್ರಮದಂಗವಾಗಿ 8.30ರಿಂದ ಶ್ರೀ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ಸಂಜೆ ನೆರವೇರಲಿದೆ. ಪ್ರತಿದಿನ ಸಂಜೆ 6.30 ರಿಂದ ರಾತ್ರಿ 11ರವರೆಗೆ ವಸ್ತು ಪ್ರದರ್ಶನ ಮಂಟಪದಲ್ಲಿ ಹಾಗೂ ಅಮೃತವರ್ಷಿಣಿ ವೇದಿಕೆಯಲ್ಲಿ ಸಾಂಸ್ಕೃತಿಕ-ಸಂಗೀತ ಹಬ್ಬವೇ ನೆರವೇರಲಿದೆ.
ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆನ.26ರಿಂದ ಡಿ.1ರವರೆಗೆ ಧರ್ಮಸ್ಥಳದ ಪ್ರೌಢಶಾಲಾ ವಠಾರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯಮಟ್ಟದ ವಸ್ತುಪ್ರದರ್ಶನ ನಡೆಯಲಿದ್ದು, ನ.26ರಂದು ಬೆಳಗ್ಗೆ 10.30ಕ್ಕೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಉದ್ಘಾಟಿಸಲಿರುವರು. ಕೃಷಿ, ಆರೋಗ್ಯ, ವಾಣಿಜ್ಯ, ಶಿಕ್ಷಣ, ಗ್ರಾಮೀಣ ಗುಡಿಕೈಗಾರಿಗಳಿಗೆ ಸಂಬಂಧಿಸಿದ 300 ಕ್ಕೂ ಮಿಕ್ಕಿ ಮಳಿಗೆಗಳಿರಲಿವೆ.