Advertisement
ಸಿಬಿಐ ವಿರುದ್ಧದ ಸಿಬಿಐ ಕದನ ಕುರಿತ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ.12ಕ್ಕೆ ನಿಗದಿಸಿ ಆದೇಶ ಹೊರಡಿಸಿದೆ.
Related Articles
Advertisement
ಸಿಬಿಐ ನಿರ್ದೇಶಕ ಆಲೋಕ್ ವರ್ಮಾ ಅವರು ಈಗಾಗಲೇ ಸರಕಾರ ತನ್ನ ಎಲ್ಲ ಅಧಿಕಾರಗಳನ್ನು ಕಿತ್ತುಕೊಂಡು ತನ್ನನ್ನು ಬಲವಂತದ ರಜೆಯ ಮೇಲೆ ಕಳುಹಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಪ್ರವೇಶಿಸಿದ್ದಾರೆ. ಅತ್ಯಂತ ಸೂಕ್ಷ್ಮ ಪ್ರಕರಣಗಳ ತನಿಖೆಯ ಹೊಣೆ ಹೊತ್ತಿರುವ ಸಿಬಿಐ ನ ಅನೇಕ ಅಧಿಕಾರಿಗಳನ್ನು ಸರಕಾರ ವರ್ಗಾಯಿಸಿರುವುದು ಸಿಬಿಐ ಕಾರ್ಯಕ್ಷಮತೆಗೆ ಸವಾಲಾಗಿ ಪರಿಣಮಿಸಿದೆ ಎಂದು ವರ್ಮಾ ಆರೋಪಿಸಿದ್ದಾರೆ.
ಇದೇ ವೇಳೆ ಸಿಬಿಐ ಉನ್ನತ ಅಧಿಕಾರಿಗಳ ವಿರುದ್ದದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸ್‌ಐಟಿ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿ ಸರಕಾರೇತರ ಸೇವಾ ಸಂಸ್ಥೆ “ಕಾಮನ್ ಕಾಸ್’ ಸಲ್ಲಿಸಿರುವ ಅರ್ಜಿ ಕೂಡ ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಇದೆ.
ಇದೇ ವೇಳೆ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಅವರು ಆಲೋಕ್ ವರ್ಮಾ ಅವರನ್ನು ಮತ್ತೆ ಹುದ್ದೆಯಲ್ಲಿ ಸ್ಥಾಪಿಸುವಂತೆ ಆಗ್ರಹಿಸಿ ದೇಶಾದ್ಯಂತದ ಎಲ್ಲ ಸಿಬಿಐ ಕಾರ್ಯಾಲಯಗಳ ಎದುರು ತಮ್ಮ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ ಕೂಡ ಈ ವಿಷಯದಲ್ಲಿ ಕಾಂಗ್ರೆಸ್ ಜತೆಗೆ ಸೇರಿಕೊಂಡಿದೆ.
ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾಗಿರುವ ಸಿಬಿಐ ನ ಘನತೆ ಮತ್ತು ವಿಶ್ವಾಸಾರ್ಹತೆಯನ್ನು ನಾಶ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮುಂದೆ ಕ್ಷಮೆಯಾಚಿಸಬೇಕು ಎಂದು ವಿಪಕ್ಷಗಳು ಒಟ್ಟಾಗಿ ಆಗ್ರಹಿಸಿವೆ.