Advertisement

ಡಿಕೆಶಿ ಆಯ್ತು, ಈಗ “ಕೈ” ಶಾಸಕಿ ಹೆಬ್ಬಾಳ್ಕರ್ ವಿಚಾರಣೆಗೆ ಇ.ಡಿ. ನೋಟಿಸ್

09:27 AM Sep 18, 2019 | Nagendra Trasi |

ಬೆಳಗಾವಿ/ಬೆಂಗಳೂರು:ಅಕ್ರಮ ಹಣದ ಅವ್ಯವಹಾರ ಪ್ರಕರಣದಲ್ಲಿ ಇ.ಡಿ ವಶದಲ್ಲಿದ್ದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ನ್ಯಾಯಾಂಗ ಬಂಧನಕ್ಕೊಳಗಾಗಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸೆಪ್ಟೆಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.

Advertisement

ಜಾರಿ ನಿರ್ದೇಶನಾಲಯ ಸೆಪ್ಟೆಂಬರ್ 14ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಆದರೆ ಅಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ, ಬೇರೆ ದಿನಾಂಕ ನಿಗದಿಪಡಿಸುವಂತೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿಕೊಂಡಿರುವುದಾಗಿ ಬೆಳಗಾವಿಯಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.

ಆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ಮತ್ತೆ ನೋಟಿಸ್ ನೀಡಿದ್ದು, ನಾಳೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿರುವುದಾಗಿ ಹೆಬ್ಬಾಳ್ಕರ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next