ನವದೆಹಲಿ: ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ದೇಶಾದ್ಯಂತ ವಾಣಿಜ್ಯ, ಮಾನವಿಕ, ವಿಜ್ಞಾನ ಸೇರಿದಂತೆ ಎಲ್ಲಾ ವಿಭಾಗಗಳ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳನ್ನು ಪ್ರದೇಶಿಕ ಭಾಷೆಗಳಲ್ಲಿ ಆರಂಭಿಸಲು ಯುಜಿಸಿ ಮುಂದಾಗಿದೆ. ಈ ಸಂಬಂಧ ಯೋಜನೆಯೊಂದನ್ನು ಸಿದ್ಧಪಡಿಸಲು ಭಾರ ತೀಯ ಭಾಷಾ ಪ್ರಾಧಿಕಾರದ ಸಹಯೋಗದಲ್ಲಿ ಶೀಘ್ರ ಉನ್ನತ ಸಮಿತಿಯೊಂದನ್ನು ರಚಿಸಲು ಯುಜಿಸಿ ತೀರ್ಮಾನಿಸಿದೆ.
2020ರ ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಶಾಲೆ ಮತ್ತು ಕಾಲೇಜುಗಳಲ್ಲಿ ಪ್ರಾದೇಶಿಕ ಭಾಷೆಗಳನ್ನು ಶಿಕ್ಷಣ ಮಾಧ್ಯಮವನ್ನಾಗಿ ಪರಿಚಯಿ ಸಲು ಕೇಂದ್ರ ಸರ್ಕಾರದ ಅನೇಕ ಉಪಕ್ರಮಗಳಲ್ಲಿ ಇದು ಕೂಡ ಒಂದಾಗಿದೆ. ಕೆಲವು ರಾಜ್ಯಗಳಲ್ಲಿ ಈಗಾಗಲೇ ಪ್ರಾದೇಶಿಕ ಭಾಷೆಗಳಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‌ಗಳ ಪಠ್ಯಪುಸ್ತಕಗಳನ್ನು ಕೇಂದ್ರ ಸರ್ಕಾರ ಹೊರತಂದಿದೆ. “ಸೂಕ್ತ ಪಠ್ಯಪುಸ್ತಕಗಳಿಲ್ಲದೆ ಪ್ರಾದೇಶಿಕ ಭಾಷೆಗಳಲ್ಲಿ ಕೋರ್ಸ್‌ಗಳನ್ನು ಆರಂಭಿಸಲು ವಿಶ್ವವಿದ್ಯಾಲಯಗಳಿಗೆ ಸಾಧ್ಯವಾಗುವುದಿಲ್ಲ,’ ಎಂದು ಯುಜಿಸಿ ಅಧ್ಯಕ್ಷ ಎಂ.ಜಗದೀಶ್ ಕುಮಾರ್ ಹೇಳಿದರು.
ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರಾದೇಶಿಕ ಭಾಷೆಗಳಲ್ಲಿ ಗುಣಮಟ್ಟದ ಪಠ್ಯಪುಸ್ತಕಗಳನ್ನು ಒದಗಿಸಲು ಪ್ರಸ್ತಾವಿತ ಉನ್ನತ ಸಮಿತಿಯು ಕೆಲಸ ಮಾಡಲಿದೆ.-ಚ.ಮು. ಕೃಷ್ಣ ಶಾಸ್ತ್ರಿ, ಭಾರತೀಯ ಭಾಷಾ ಪ್ರಾಧಿಕಾರದ ಅಧ್ಯಕ್ಷ