Advertisement
ರುದ್ರಭೂಮಿಗಾಗಿ ಗ್ರಾ.ಪಂ. ವ್ಯಾಪ್ತಿಯ ಕಲ್ಲಂತಡ್ಕದಲ್ಲಿ ಕಡಬ-ಪಂಜ ರಸ್ತೆಯ ಪಕ್ಕದಲ್ಲಿ ಸ.ನಂ. 306/1ಎ1ಯಲ್ಲಿ 1.03 ಎಕ್ರೆ ಭೂಮಿ ಕಾದಿರಿಸಲಾಗಿದೆ. ಈ ಭೂಮಿಯಲ್ಲಿ ಸಾಧಾರಣ ಚಿತಾಗಾರ ಇದೆಯಾದರೂ ಇಲ್ಲಿ ಸಮರ್ಪಕ ವ್ಯವಸ್ಥೆಗಳಿಲ್ಲ. ಇರುವ ಕಟ್ಟಡ ನಿರ್ವಹಣೆ ಇಲ್ಲದೆ ಪಾಳುಬಿದ್ದಿದೆ. ಚಿತಾಗಾರದ ಛಾವಣಿಯ ತಗಡುಶೀಟುಗಳು ಗಾಳಿಗೆ ಹಾರಿಹೋಗಿವೆ. ಈಗಲೋ, ಆಗಲೋ ಎನ್ನುವಂತಿದೆ ಇಲ್ಲಿನ ಸ್ಥಿತಿ. ಸರಿಯಾದ ಸಂಪರ್ಕ ರಸ್ತೆ ನಿರ್ಮಾಣವಾಗಿಲ್ಲ. ಕಾದಿರಿಸಿರುವ ಜಮೀನಿನ ಸುತ್ತ ಆವರಣಗೋಡೆ ನಿರ್ಮಿಸಿ ಭದ್ರಪಡಿಸಿಕೊಂಡು ಅತಿಕ್ರಮಣ ತಡೆಯುವಲ್ಲಿ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಇನ್ನೇನು ಮಳೆಗಾಲ ಆರಂಭವಾಗಲಿದೆ. ಮಳೆಗಾಲದಲ್ಲಿ ಇಲ್ಲಿ ಶವ ಸಂಸ್ಕಾರ ನಡೆಸುವುದು ಸಾಧ್ಯವೇ ಇಲ್ಲ ಎನ್ನುವ ಪರಿಸ್ಥಿತಿ ಇದೆ ಎನ್ನುವುದು ಸ್ಥಳೀಯರ ದೂರು. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಕುರಿತು ಗಮನ ಹರಿಸಿ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ.
ಮಂಜೂರುಗೊಂಡಿರುವ ಅನುದಾನ ಬಳಕೆಯಾಗದೆ ಉಳಿದಿದೆ. ಈ ಅನುದಾನವನ್ನು ಬಳಸಿ ರುದ್ರಭೂಮಿಗೆ ಹೊಸದಾದ ಚಿತಾಗಾರ ಅಳವಡಿಸಿ ಮೂಲ ಸೌಲಭ್ಯಗಳನ್ನು ನೀಡಲು ಪ್ರಯತ್ನಿಸ ಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಲಭ್ಯವಿರುವ ಅನುದಾನ ಬಳಸುವ ನಿಟ್ಟಿನಲ್ಲಿ ಅಂದಾಜುಪಟ್ಟಿ ತಯಾರಿಸಲಾಗಿದೆ. ಪಂಚಾಯತ್ ಅನುದಾನದಲ್ಲಿ ರಸ್ತೆ ನಿರ್ಮಿಸಿ, ರುದ್ರಭೂಮಿಯ ಜಾಗಕ್ಕೆ ತಂತಿ ಬೇಲಿ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ.
– ಪಿ.ಪಿ. ವರ್ಗೀಸ್, ಜಿ.ಪಂ. ಸದಸ್ಯರು, ಕಡಬ
Related Articles
ವಿದ್ಯುತ್ ಚಿತಾಗಾರ ಸಹಿತ ಸುಸಜ್ಜಿತ ರುದ್ರಭೂಮಿ ನಿರ್ಮಾಣಕ್ಕಾಗಿ 26.08 ಲಕ್ಷ ರೂ.ಗಳ ಅಂದಾಜುಪಟ್ಟಿ ತಯಾರಿಸಿ ಸರಕಾರಕ್ಕೆ ಕಳುಹಿಸಿ ಹಲವು ವರ್ಷಗಳು ಕಳೆದರೂ ಬಿಡುಗಡೆಯಾಗಿರುವುದು ಕೇವಲ 4 ಲಕ್ಷ ರೂ. ಮಾತ್ರ. ಅದೂ ಕೂಡ ಬಳಕೆಯಾಗದೆ ಕಳೆದ 7 ವರ್ಷಗಳಿಂದ ತಹಶೀಲ್ದಾರರ ಖಾತೆಯಲ್ಲಿಯೇ ಉಳಿದಿದೆ.
Advertisement
ಮನವಿ ಸಲ್ಲಿಸಿದ್ದೇವೆಸರಕಾರವು ಕೇವಲ 4 ಲಕ್ಷ ರೂ.ಗಳನ್ನು ಮಾತ್ರ ಮಂಜೂರು ಮಾಡಿದೆ. ಈ ಅನುದಾನದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸುವುದು ಅಸಾಧ್ಯ. ಹೆಚ್ಚಿನ ಅನುದಾನ ನೀಡುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.
- ಚೆನ್ನಪ್ಪ ಗೌಡ ಕಜೆಮೂಲೆ, ಪಿಡಿಒ, ಕಡಬ ಗ್ರಾ.ಪಂ. ನಾಗರಾಜ್ ಎನ್.ಕೆ.