Advertisement

New Government ಕಸರತ್ತು: ಮುಖ್ಯಮಂತ್ರಿ ಹುದ್ದೆಗೆ ನಡೆದಿದೆ ಬಿರುಸಿನ ಪೈಪೋಟಿ

11:25 AM Dec 05, 2023 | Team Udayavani |

ಹೈದರಾಬಾದ್‌/ಹೊಸದಿಲ್ಲಿ: ಪಂಚರಾಜ್ಯ ಗಳ ಚುನಾವಣೆಯ ಪೈಕಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢಗಳಲ್ಲಿ ಬಿಜೆಪಿ ಗೆದ್ದು ಸರಕಾರ ರಚನೆಯ ಪ್ರಕ್ರಿಯೆಯಲ್ಲಿ ತೊಡಗಿದ್ದರೆ, ತೆಲಂಗಾಣದಲ್ಲಿ ಸಿಎಂ ಆಯ್ಕೆ ಕಗ್ಗಂಟಾಗಿದೆ.

Advertisement

ತೆಲಂಗಾಣದಲ್ಲಿ ಕಾಂಗ್ರೆಸ್‌ನ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಹೊಣೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ನೀಡ ಲಾಗಿದೆ. ಈ ಬಗ್ಗೆ ಹೈದರಾಬಾದ್‌ನಲ್ಲಿ ಸೋಮ ವಾರ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನೂತನ ಶಾಸಕರ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಯಾರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಬೇಕು ಎಂಬ ಬಗ್ಗೆ ಬಿರುಸಿನ ಚರ್ಚೆ ನಡೆಯಿತು. ರೇವಂತ್‌ ರೆಡ್ಡಿ ಅವರನ್ನೇ ಸಿಎಂ ಮಾಡಬೇಕು ಎಂಬ ಬಗ್ಗೆ ಪ್ರಸ್ತಾವವಾಯಿತು. ಮತ್ತೂಬ್ಬ ಮುಖಂಡ ಮಲ್ಲು ಭಟ್ಟಿ ವಿಕ್ರಮಾರ್ಕ, ಉತ್ತಮ ಕುಮಾರ್‌ ರೆಡ್ಡಿಯವರೂ ಕೂಡ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಹೀಗಾಗಿ ಸಭೆಯಲ್ಲಿ ಯಾವುದೇ ರೀತಿಯಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ.

ಆರು ಪಕ್ಷಗಳ ಮೈತ್ರಿಕೂಟಕ್ಕೆ ಮಿಜೋರಾಂ
ಐಜ್ವಾಲ್‌: ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಆಡಳಿತಾರೂಢ ಮಿಜೋ ನ್ಯಾಶನಲ್‌ ಫ್ರಂಟ್‌ (ಎಂಎನ್‌ಎಫ್) ಸೋಲನುಭವಿಸಿದೆ. 40 ಸ್ಥಾನಗಳ ವಿಧಾನಸಭೆಯಲ್ಲಿ ಆರು ಪಕ್ಷಗಳನ್ನು ಒಳಗೊಡ ಝೊರಾಂ ಪೀಪಲ್ಸ್‌ ಮೂವ್‌ಮೆಂಟ್‌ (ಝೆಡ್‌ಪಿಎಂ) ಮೈತ್ರಿಕೂಟ 27 ಸ್ಥಾನಗಳನ್ನು ಗೆದ್ದು ಜಯ ಸಾಧಿಸಿದೆ. ಹಾಲಿ ಆಡಳಿತ ಪಕ್ಷ 10 ಸ್ಥಾನಗಳಲ್ಲಿ ಗೆದ್ದಿದೆ. ಗಮನಾರ್ಹ ಸಾಧನೆ ಎಂದರೆ ಬಿಜೆಪಿಯ ಬಲ 2ಕ್ಕೆ ಏರಿಕೆಯಾಗಿದೆ. ಸ್ವತಃ ಹಾಲಿ ಸಿಎಂ ಝೊರಾಂತಾಂಗಾ ಅವರು ಝೆಡ್‌ಪಿಎಂನ ಅಭ್ಯರ್ಥಿಯ ಎದುರು 2,101 ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ. ಝೆಡ್‌ಪಿಎಂನ ಹಿರಿಯ ನಾಯಕ, ನಿವೃತ್ತ ಐಪಿಎಸ್‌ ಅಧಿಕಾರಿ ಲಾಲುªಹೋಮಾ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.

ವಸುಂಧರಾ ರಾಜೇ ಪರ 20 ಶಾಸಕರು?
ರಾಜಸ್ಥಾನದ 115 ಕ್ಷೇತ್ರಗಳಲ್ಲಿ ಗೆದ್ದಿರುವ ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಬಿರುಸಾಗಿಯೇ ಇದೆ. ಹಿರಿಯ ನಾಯಕಿ ಮತ್ತು ಮಾಜಿ ಸಿಎಂ ವಸುಂಧರಾ ರಾಜೇ ಪರ 20 ಶಾಸಕರು ಧ್ವನಿ ಎತ್ತಿದ್ದಾರೆ. ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಸಿಎಂ ಆಯ್ಕೆಯ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇನ್ನೊಂದೆಡೆ ಬಾಬಾ ಬಾಲಕನಾಥ್‌ ಕೂಡ ಹೊಸದಿಲ್ಲಿಯಲ್ಲಿದ್ದಾರೆ. ಶಾಸಕರಾಗಿ ಆಯ್ಕೆಯಾಗಿರುವ ನಾಲ್ವರು ಸಂಸದರಿಗೆ ರಾಜೀನಾಮೆ ನೀಡುವಂತೆ ಬಿಜೆಪಿ ಸೂಚಿಸಿದೆ.

Advertisement

ಲೋಕಸಭೆ ಚುನಾವಣೆ ವರೆಗೆ ಚೌಹಾಣ್‌ ಸಿಎಂ?
ಲೋಕಸಭೆ ಚುನಾವಣೆ ವರೆಗೆ ಮಧ್ಯಪ್ರದೇಶ ಸಿಎಂ ಸ್ಥಾನದಲ್ಲಿ ಹಾಲಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನೇ ಮುಂದುವರಿಸುವ ಸಾಧ್ಯತೆಗಳು ಇವೆ. 29 ಲೋಕಸಭಾ ಸ್ಥಾನಗಳನ್ನು ಹೊಂದಿರುವ ರಾಜ್ಯದಲ್ಲಿ ಹಾಲಿ ಸಿಎಂ ಅವರನ್ನೇ ಮುಂದುವರಿಸಿದರೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರ ಬಿಜೆಪಿಯದ್ದು. ಹೊಸ ಶಾಸಕಾಂಗ ಪಕ್ಷದ ಸಭೆ ಯಾವಾಗ ನಡೆಯಲಿದೆ ಎನ್ನುವುದು ಸದ್ಯ ನಿಗದಿಯಾಗಿಲ್ಲ.

ಛತ್ತೀಸ್‌ಗಢದಲ್ಲಿ ಬಿಜೆಪಿ ಶಾಸಕರ ಸಭೆ
ಕಾಂಗ್ರೆಸನ್ನು ಸೋಲಿಸಿ ಅಧಿಕಾರಕ್ಕೆ ಏರಿರುವ ಬಿಜೆಪಿಯ ನೂತನ ಶಾಸಕರು ರಾಯ್‌ಪುರದಲ್ಲಿ ಸೋಮವಾರ ಸಭೆ ನಡೆಸಿದರು. ಆದರೆ ಮುಖ್ಯಮಂತ್ರಿ ಯಾರು ಎಂಬುದು ತೀರ್ಮಾನವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಚುನಾವಣೆ ವೇಳೆ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಮಾಜಿ ಸಿಎಂ ಡಾ| ರಮಣ್‌ ಸಿಂಗ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next